ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ನಮ್ಮ ಶಾಸಕರು ಭೇಟಿ ಬಗ್ಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಅವರು ಸ್ನೆಹಪೂರ್ವಕವಾಗಿ ಭೇಟಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.
ಇದು ಅವರ ವೈಯುಕ್ತಿಕವಾದ ಭೇಟಿ, ಈ ಮಾತನ್ನು ಅವರೇ ಹೇಳಿದ್ದಾರೆ. ನಾನೇನು ಮಧ್ಯಸ್ಥಿಕೆ ವಹಿಸಿ ಯಾವುದೇ ಸಂದೇಶ ಕಳುಹಿಸಿಲ್ಲ. ಈಗಾಗಲೇ ಗುಬ್ಬಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೇನೆ. ನಮ್ಮ ಅಭ್ಯರ್ಥಿ ನಾಗರಾಜ್ ಈಗಾಗಲೇ ಪಕ್ಷದ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸಾ.ರಾ.ಮಹೇಶ್ ಮತ್ತು ಅನ್ನದಾನಿ ಅವರು ಭೇಟಿ ಮಾಡಿರುವ ಬಗ್ಗೆ ಅಪಾರ್ಥ ಬೇಡ. ಅದರ ಬಗ್ಗೆ ಹೆಚ್ಚು ಚರ್ಚೆಯೂ ಅಗತ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ, ಬಸವನಗುಡಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್, ಪಕ್ಷದ ಹಿರಿಯ ಮುಖಂಡ ಬಾಗೇಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ನರೇಂದ್ರ ಮೋದಿ ಅವರನ್ನು ಕರೆತಂದು ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿಸಿದರೆ ಒಕ್ಕಲಿಗರ ಮತಗಳು ಬರಲ್ಲ
ರಾಜ್ಯ ಸರಕಾರ ಮತ್ತು ಬಿಜೆಪಿ ನಾಯಕರು ನಾಡಪ್ರಭು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಜನರು ಕೂಡ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.
ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಪ್ರತಿಮೆ ಸ್ಥಾಪನೆ ಮಾಡಿ ಒಕ್ಕಲಿಗರ ಮತ ಸೆಳೆಯಬಹುದು ಎಂದು ಬಿಜೆಪಿಯವರು ಲೆಕ್ಕಾಚಾರ ಮಾಡಿದ್ದಾರೆ. ಬಿಜೆಪಿ ನಾಯಕರು ಆ ರೀತಿ ಭ್ರಮೆಯಲ್ಲಿದ್ದರೆ ಜನರೇ ಆ ಭ್ರಮೆಯಿಂದ ಹೊರ ತರುತ್ತಾರೆ ಎಂದು ಬಿಜೆಪಿ ನಾಯಕರಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ನೀಡಿದರು.
ಕೆಂಪೇಗೌಡ ಪ್ರತಿಮೆ ಅನಾವರಣ ಬಿಜೆಪಿ ಸರ್ಕಾರದ ನಿಯೋಜಿತ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ, ಹೋಗುತ್ತಾರೆ ಅಷ್ಟೇ. ಇದಕ್ಕೆ ನಾನು ಹೆಚ್ಚು ಮಹತ್ವ ಕೊಡಲು ಹೋಗುವುದಿಲ್ಲ ಎಂದರು ಅವರು.
ನರೇಂದ್ರ ಮೋದಿ ಅವರನ್ನು ಕರೆತಂದು ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿಸಿದರೆ ಒಕ್ಕಲಿಗರ ಮತಗಳು ಬರುತ್ತದೆಂದು ಬಿಜೆಪಿಯವರು ಆ ರೀತಿ ಭ್ರಮೆಯಲ್ಲಿದ್ದರೆ ಜನರೇ ಅದರಿಂದ ಹೊರ ತರುತ್ತಾರೆ ಎಂದು ಅವರು ಹೇಳಿದರು.
ಬೆಂಗಳೂರು ದೊಡ್ಡಮಟ್ಟದಲ್ಲಿ ಬೆಳೆದಿದೆ. ಅದೇ ರೀತಿ ನಿರುದ್ಯೋಗ ಸಮಸ್ಯೆ ಇದೆ. ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತಾವಧಿಯಲ್ಲಿ ಬೆಂಗಳೂರಲ್ಲಿ ಹಲವಾರು ರೀತಿಯ ಅನಾಹುತ ಮಾಡಿದ್ದಾರೆ. ಅದನ್ನು ಸರಿಪಡಿಸುವ ಮೂಲಕ ಕೆಂಪೇಗೌಡರಿಗೆ ಗೌರವ ಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದರು.