ಪ್ರತಿದಿನ ಬೆಳಗ್ಗೆ ಏಳುತ್ತಿದ್ದಂತೆ ದೇವರ ಮಂತ್ರ ಜಪಿಸಿ, ದೇವರ ಫೋಟೋ ನೋಡಿ ಈ ದಿನ ಚೆನ್ನಾಗಿರಲಿ ಎಂದು ಪ್ರಾರ್ಥಿಸುತ್ತೇವೆ. ಗ್ರಹಗತಿಗಳು ನಿಮ್ಮ ಪರವಾಗಿದ್ದರೆ ಖಂಡಿತ ದಿನ ಚೆನ್ನಾಗಿರುತ್ತದೆ. ಇಲ್ಲವಾದರೆ ಇಡೀ ದಿನ ಸಮಸ್ಯೆ ಬೆನ್ನೇರುತ್ತದೆ. ಇಂದು 11 ಡಿಸೆಂಬರ್ 2024, ಬುಧವಾರ. ಈ ದಿನ 12 ರಾಶಿಗಳಿಗೆ ದಿನ ಹೇಗಿರಲಿದೆ? ಮೇಷ ರಾಶಿಯಿಂದ ಮೀನ ರಾಶಿಯವರೆಗೆ ದಿನ ಭವಿಷ್ಯ ನೋಡಿ.
ಮೇಷ ರಾಶಿ
ಮೇಷ ರಾಶಿಯ ಜನರಿಗೆ ಇಂದು ಬಹಳ ಫಲಪ್ರದವಾದ ದಿನವಾಗಲಿದೆ. ಒಂದರ ನಂತರ ಒಂದರಂತೆ ಒಳ್ಳೆಯ ಸುದ್ದಿಗಳನ್ನು ಕೇಳುವಿರಿ. ನಿಮ್ಮ ಸುತ್ತಲಿನ ವಾತಾವರಣ ಚೆನ್ನಾಗಿರುತ್ತದೆ. ವ್ಯಾಪಾರದಲ್ಲಿ ಕೆಲವು ಹೊಸ ಯೋಜನೆಗಳಿಂದ ನೀವು ಲಾಭವನ್ನು ಪಡೆಯುತ್ತೀರಿ, ಅದು ನಿಮಗೆ ಖುಷಿ ನೀಡುತ್ತದೆ. ನಿಮ್ಮ ಮನಸ್ಸಿನಲ್ಲಿ ಬಹಳ ದಿನಗಳಿಂದ ಯಾವುದೋ ಕೆಲಸ ಮಾಡಬೇಕೆಂದುಕೊಂಡಿದ್ದರೆ ಅದನ್ನು ಇಂದು ಮಾಡಬಹುದು.
ವೃಷಭ ರಾಶಿ
ವೃಷಭ ರಾಶಿಯವರಿಗೆ ಇಂದು ಸ್ವಲ್ಪ ಒತ್ತಡ ತುಂಬಿದ ದಿನವಾಗಿದೆ. ನಿಮ್ಮ ಕೆಲಸದಲ್ಲಿ ನೀವು ಹೆಚ್ಚು ಶ್ರಮ ಪಡಬೇಕಾಗಿರುತ್ತದೆ. ನೀವು ಕಣ್ಣಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬಹುದು, ಅದು ನಿಮಗೆ ಸ್ವಲ್ಪ ತೊಂದರೆ ನೀಡುತ್ತದೆ. ವಹಿವಾಟುಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನೀವು ಸಂಪೂರ್ಣ ಗಮನ ಹರಿಸಬೇಕು. ನಿಮ್ಮ ಸಂಗಾತಿಯಿಂದ ನೀವು ಆಶ್ಚರ್ಯಕರ ಉಡುಗೊರೆಯನ್ನು ಪಡೆಯಬಹುದು. ಕುಟುಂಬದ ಹಿರಿಯರ ವಿಚಾರದಲ್ಲಿ ನಿಮಗೆ ಬೇಸರ ಉಂಟಾಗುವ ಸಾಧ್ಯತೆ ಇದೆ.
ಮಿಥುನ ರಾಶಿ
ಇಂದು ಮಿಥುನ ರಾಶಿಯವರಿಗೆ ವ್ಯಾಪಾರದ ದೃಷ್ಟಿಯಿಂದ ಉತ್ತಮ ದಿನವಾಗಲಿದೆ. ನಿಮ್ಮ ವ್ಯಾಪಾರವು ಈಗಾಗಲೇ ಬೆಳೆಯುತ್ತದೆ, ಅದು ನಿಮಗೆ ಸಂತೋಷವನ್ನು ನೀಡುತ್ತದೆ. ಯಾವುದೇ ಹೊಸ ಕೆಲಸವನ್ನು ಮಾಡುವ ಮೊದಲು ಹಿರಿಯ ಸದಸ್ಯರ ಅಭಿಪ್ರಾಯವನ್ನು ನೀವು ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ನಿಮ್ಮ ಯಾವುದೇ ಪ್ರಮುಖ ಮಾಹಿತಿಯನ್ನು ನೀವು ಹೊರಗಿನವರಿಗೆ ಬಹಿರಂಗಪಡಿಸಬಾರದು, ಇಲ್ಲದಿದ್ದರೆ ಅವರು ಅದರ ಲಾಭವನ್ನು ಪಡೆಯಬಹುದು.
ಕಟಕ ರಾಶಿ
ಕಟಕ ರಾಶಿಯವರಿಗೆ ಇಂದು ಖರ್ಚುಗಳು ಹೆಚ್ಚಾಗುತ್ತವೆ, ಇದು ನಿಮಗೆ ಆರ್ಥಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ನಿಮ್ಮ ಸಹೋದ್ಯೋಗಿಗಳ ಜೊತೆ ನಿಮಗೆ ಮನಸ್ತಾಪ ಉಂಟಾಗಬಹುದು. ಮಕ್ಕಳ ಕಡೆಯಿಂದ ಒಳ್ಳೆಯ ಸುದ್ದಿ ಕೇಳುವಿರಿ. ನಿಮ್ಮ ಹಿಂದಿನ ಕೆಲವು ತಪ್ಪುಗಳಿಂದ ನೀವು ಪಾಠ ಕಲಿಯಬೇಕಾಗಿದೆ. ಒಡಹುಟ್ಟಿದವರು ನಿಮಗೆ ಸಹಾಯ ಮಾಡಲಿದ್ದಾರೆ.
ಉತ್ತಮ ಸಂಬಂಧಗಳನ್ನು ಕಾಯ್ದುಕೊಳ್ಳಲು, ವಯಸ್ಸಾದ ಕಾಲದಲ್ಲಿ ನೆಮ್ಮದಿಯಾಗಿ ಬದುಕಲು ಕೌಟುಂಬಿಕ ವಿವಾದಗಳನ್ನು ನಿರ್ವಹಿಸಿದ ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ ಹಿರಿಯ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಶೀಲರವರು ಕೊಟ್ಟಿದ್ದಾರೆನ್ನುವ ಸಲಹೆಗಳು ಇಲ್ಲಿವೆ.
ಸಂಗಾತಿಯ ಚುಚ್ಚು ಮಾತುಗಳಿಂದ ನರಳಬೇಡಿ..!
.ಸಿಂಹ ರಾಶಿ
ಇಂದು ಸಿಂಹ ರಾಶಿಯವರು ತಮ್ಮ ಕೆಲಸದ ಬಗ್ಗೆ ಸಂಪೂರ್ಣ ಗಮನ ನೀಡುವ ದಿನವಾಗಿದೆ. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿದರೆ ಗೆಲುವು ಸಾಧಿಸುತ್ತಾರೆ. ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಫಲಿತಾಂಶವನ್ನು ನೀವು ಪಡೆಯುತ್ತೀರಿ. ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ಪ್ರೀತಿಯಲ್ಲಿರುವ ಜನರು ನಿಮ್ಮ ಸಂಗಾತಿಯನ್ನು ಲಾಂಗ್ ಡ್ರೈವ್ಗೆ ಕರೆದೊಯ್ಯಬಹುದು.
ಕನ್ಯಾ ರಾಶಿ
ಕನ್ಯಾ ರಾಶಿಯವರು ಇಂದು ದಾನ ಧರ್ಮಗಳಂಥ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆ. ನಿಮ್ಮ ಖರ್ಚುಗಳ ಬಗ್ಗೆ ಸಂಪೂರ್ಣ ಗಮನ ಕೊಡಿ. ನಿಮ್ಮ ಅನನ್ಯ ಪ್ರಯತ್ನಗಳು ಫಲ ನೀಡುತ್ತವೆ. ನಿಮ್ಮ ಕೆಲಸದಿಂದ ನಿಮ್ಮ ಕುಟುಂಬ ಸಂತೋಷವಾಗುತ್ತದೆ. ನೀವು ಕೆಲವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು. ಯಾವುದೇ ಕೆಲಸದ ಬಗ್ಗೆ ಒತ್ತಡವನ್ನು ಅನುಭವಿಸುತ್ತಿದ್ದರೆ, ಅದು ಶೀಘ್ರದಲ್ಲೇ ಸರಿ ಆಗಲಿದೆ.
ತುಲಾ ರಾಶಿ
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಬಹುದು. ಸ್ನೇಹಿತರಿಂದ ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಸಲಹೆಯನ್ನು ತೆಗೆದುಕೊಳ್ಳಬಾರದು. ಕೆಲಸದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಉಂಟಾಗಬಹುದು, ಆದ್ದರಿಂದ ಆತುರ ಪಡಬೇಡಿ. ಮನೆಯಲ್ಲಿ ಹಿರಿಯರ ಆರೋಗ್ಯ ಸಮಸ್ಯೆಯಿಂದ ನಿಮಗೆ ಬೇಸರ ಉಂಟಾಗಬಹುದು. ಆರ್ಥಿಕ ಸಮಸ್ಯೆ ಉಂಟಾಗಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ದಿನವು ಮಿಶ್ರಫಲ ನೀಡುತ್ತದೆ. ನಿಮ್ಮ ಮನಸ್ಸಿನಲ್ಲಿರುವ ಆಸೆಯ ಬಗ್ಗೆ ನಿಮ್ಮ ತಾಯಿಯೊಂದಿಗೆ ಚರ್ಚಿಸಬಹುದು. ಕುಟುಂಬದಲ್ಲಿ ಕೆಲವು ಶುಭ ಕಾರ್ಯಗಳನ್ನು ಆಯೋಜಿಸುವುದರಿಂದ ಕುಟುಂಬದ ಸದಸ್ಯರೆಲ್ಲರೂ ಕಾರ್ಯನಿರತರಾಗಿರುತ್ತಾರೆ. ಕಚೇರಿಯಲ್ಲಿ ಇಂದು ನಿಮ್ಮ ದಿನವಾಗಲಿದೆ, ಯಾವುದೇ ಸಮಸ್ಯೆ ಇರುವುದಿಲ್ಲ, ನೆಮ್ಮದಿಯ ವಾತಾವರಣ ಇರಲಿದೆ. ವಾಹನ ಲಾಭವಿದೆ.
ಧನು ರಾಶಿ
ಕೆಲಸದಲ್ಲಿ ಒತ್ತಡ ಇರಲಿದೆ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯದೆ ತೊಂದರೆ ಅನುಭವಿಸುವಿರಿ. ಇದುವರೆಗೂ ಯಾವುದಾದರೂ ಬಾಕಿ ಇರುವ ಕೆಲಸವನ್ನು ಉಳಿಸಿಕೊಂಡಿದ್ದರೆ ಅದನು ಪೂರ್ಣಗೊಳಿಸಬಹುದು. ಕಚೇರಿಯಲ್ಲಿ ನಿಮ್ಮ ಹಿರಿಯ ಅಧಿಕಾರಿಗಳು ನಿಮ್ಮ ಕೆಲಸವನ್ನು ಹೊಗಳುತ್ತಾರೆ. ಕುಟುಂಬದಲ್ಲಿ ಹೊಸ ಅತಿಥಿಯ ಆಗಮನದಿಂದ ನೀವು ಸಂತೋಷವಾಗಿರುತ್ತೀರಿ.
ಮಕರ ರಾಶಿ
ಮಕರ ರಾಶಿಯವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ನೀವು ಯಾರಿಗೂ ಹಣವನ್ನು ಸಾಲವಾಗಿ ನೀಡಬಾರದು ಮತ್ತು ಯಾವುದೇ ಆಸ್ತಿ ವ್ಯವಹಾರವನ್ನು ಮಾಡುವಾಗ, ನೀವು ಅದರ ಪ್ರಮುಖ ದಾಖಲೆಗಳ ಬಗ್ಗೆ ಸಂಪೂರ್ಣ ಗಮನ ಹರಿಸಬೇಕು. ಆನ್ಲೈನ್ನಲ್ಲಿ ಕೆಲಸ ಮಾಡುವ ಜನರಿಗೆ ದೊಡ್ಡ ಲಾಭ ನೀಡುವ ಆರ್ಡರ್ ಸಿಗಲಿದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಕುಟುಂಬದಲ್ಲಿ ಹಿರಿಯರಿಗೆ ಅನಾರೋಗ್ಯ ಕಾಡುತ್ತದೆ.
ಕುಂಭ ರಾಶಿ
ಕುಂಭ ರಾಶಿಯ ಜನರಿಗೆ ಈ ದಿನ ಸಕಾರಾತ್ಮಕ ಫಲಿತಾಂಶ ತರುತ್ತದೆ. ನಿಮ್ಮ ಹಿಂದಿನ ಕೆಲವು ತಪ್ಪುಗಳಿಂದ ನೀವು ಪಾಠ ಕಲಿಯಬೇಕಾಗುತ್ತದೆ. ಸಣ್ಣ ಪುಟ್ಟ ಕೌಟುಂಬಿಕ ಸಮಸ್ಯೆಗಳು ಇದ್ದರೂ ದಿನಾಂತ್ಯದಲ್ಲಿ ಎಲ್ಲವೂ ಸರಿ ಆಗಲಿದೆ. ಕಚೇರಿಯಲ್ಲಿ ಹಿರಿಯ ಅಧಿಕಾರಿ ನಿಮ್ಮ ಕೆಲಸದ ಬಗ್ಗೆ ಚರ್ಚಿಸುತ್ತಾರೆ. ಕೆಲಸದ ಹೊರೆ ಹೆಚ್ಚಾಗಲಿದೆ. ರಾಜಕೀಯದಲ್ಲಿರುವ ಜನರು ಹೊಸ ಅವಕಾಶಗಳನ್ನು ಪಡೆಯುತ್ತಾರೆ.
ಮೀನ ರಾಶಿ
ಮೀನ ರಾಶಿಯವರಿಗೆ ಈ ದಿನ ಸಣ್ಣ ಪುಟ್ಟ ಸಮಸ್ಯೆಗಳನ್ನು ತರಲಿದೆ. ನಿಮ್ಮ ಭವಿಷ್ಯದ ಬಗ್ಗೆ ನೀವು ಸ್ವಲ್ಪ ಜಾಗರೂಕರಾಗಿರಬೇಕು. ನೀವು ವ್ಯಾಪಾರದಲ್ಲಿ ಯಾರೊಂದಿಗೂ ಪಾಲುದಾರಿಕೆ ಮಾಡುವುದನ್ನು ತಪ್ಪಿಸಬೇಕು. ನೀವು ಆಸ್ತಿಯಲ್ಲಿ ಹೂಡಿಕೆ ಮಾಡಲು ಯೋಚಿಸಿದ್ದರೆ, ಅದಕ್ಕೂ ಮುನ್ನ ತಜ್ಞರ ಸಹಾಯ ತೆಗೆದುಕೊಳ್ಳಬೇಕಾಗುತ್ತದೆ. ಒಡಹುಟ್ಟಿದವರಿಗೆ ಕೆಲವೊಂದು ವಿಚಾರಗಳಲ್ಲಿ ಸಣ್ಣ ಪುಟ್ಟ ವಾದ ವಿವಾದ ಉಂಟಾಗಬಹುದು. ಹಳೆಯ ಸ್ನೇಹಿತರೊಬ್ಬರು ಬಹಳ ಸಮಯದ ನಂತರ ನಿಮ್ಮನ್ನು ಭೇಟಿಯಾಗಲು ಬರಬಹುದು
ಗಮನಿಸಿ: ಇಲ್ಲಿ ತಿಳಿಸಿರುವ ಮಾಹಿತಿಯು ಜ್ಯೋತಿಷ್ಯ ಶಾಸ್ತ್ರವನ್ನು ಆಧರಿಸಿದ್ದು, ನಿಮ್ಮ ನಂಬಿಕೆಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಿ. ಹೆಚ್ಚಿನ ಮಾಹಿತಿಗೆ ತಜ್ಞ ಜ್ಯೋತಿಷಿಗಳನ್ನು ಸಂಪರ್ಕಿಸಿ.