ಇಂದು ಶುಕ್ರವಾರ, ಈ ದಿನ ಲಕ್ಷ್ಮೀಗೆ ಸಂಬಂಧಿಸಿದ ವಾರ. ಈ ಶುಭ ಶುಕ್ರವಾರ 12 ರಾಶಿಗಳ ಭವಿಷ್ಯ ಹೇಗಿರಲಿದೆ? ಯಾರಿಗೆ ಶುಭ ಫಲ? ಯಾರಿಗೆ ಸಮಸ್ಯೆ? ಮೇಷ ರಾಶಿಯಿಂದ ಮೀನ ರಾಶಿಯವರೆಗೆ 13 ಡಿಸೆಂಬರ್ 2024ರ ದಿನ ಭವಿಷ್ಯ ನೋಡಿ.
ಮೇಷ ರಾಶಿ
ಈ ರಾಶಿಯ ಜನರು ತಮ್ಮ ಕೆಲಸದ ಬಗ್ಗೆ ಸಂಪೂರ್ಣ ಗಮನ ಹರಿಸಬೇಕಾಗುತ್ತದೆ. ನಿಮ್ಮ ಮಾತು ಮತ್ತು ನಡವಳಿಕೆಯ ಮೇಲೆ ನಿಯಂತ್ರಣವನ್ನು ಕಾಪಾಡಿಕೊಂಡರೆ ಉತ್ತಮ. ತಂದೆಯು ನಿಮಗೆ ಕೆಲಸದ ಬಗ್ಗೆ ಕೆಲವು ಸಲಹೆಗಳನ್ನು ನೀಡಬಹುದು, ಅದು ನಿಮಗೆ ತುಂಬಾ ಉಪಯುಕ್ತವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳ ಸಹಾಯವನ್ನು ನೀವು ತೆಗೆದುಕೊಳ್ಳಬೇಕಾಗಬಹುದು. ನಿಮ್ಮ ವ್ಯವಹಾರದಲ್ಲಿ ನೀವು ಯಾವುದೇ ಬದಲಾವಣೆಗಳನ್ನು ಮಾಡಿದರೆ, ಅದು ನಿಮಗೆ ಸ್ವಲ್ಪ ನಷ್ಟವನ್ನು ಉಂಟುಮಾಡಬಹುದು. ಆದ್ದರಿಂದ ಹಣಕಾಸಿನ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಇರಬೇಕು.
ವೃಷಭ ರಾಶಿ
ವೃಷಭ ರಾಶಿಯವರಿಗೆ ಆರೋಗ್ಯದ ವಿಷಯದಲ್ಲಿ ಈ ದಿನ ಏರಿಳಿತಗಳಿಂದ ಕೂಡಿರುತ್ತದೆ. ನಿಮ್ಮ ಆರೋಗ್ಯ ದುರ್ಬಲವಾಗಿರುತ್ತದೆ, ಹಳೆಯ ಆರೋಗ್ಯ ಸಮಸ್ಯೆಗಳು ಕಾಡುವ ಸಾಧ್ಯತೆಯಿದೆ. ನೀವು ಯಾರಿಗಾದರೂ ಭರವಸೆ ನೀಡಿದ್ದರೆ ಅದನ್ನು ಪೂರೈಸುವುದನ್ನು ಮರೆಯದಿರಿ, ಇಲ್ಲದಿದ್ದರೆ ಅವರು ನಿಮ್ಮ ಮೇಲೆ ಕೋಪಗೊಳ್ಳಬಹುದು. ನಿಮ್ಮ ಮನೆಯ ಸ್ವಚ್ಛತೆ ಮತ್ತು ನಿರ್ವಹಣೆಗೆ ನೀವು ಸಂಪೂರ್ಣ ಗಮನ ಹರಿಸುತ್ತೀರಿ. ಹೊಸ ವಾಹನ ಖರೀದಿಸಲಿದ್ದೀರಿ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಇಂದು ಸಣ್ಣ ಪುಟ್ಟ ಸಮಸ್ಯೆಗಳು ಉಂಟಾಗಲಿದೆ. ಯಾರೊಂದಿಗೂ ಮಾತನಾಡುವ ಮೊದಲು ಯೋಚಿಸಬೇಕು. ಯಾವುದೇ ಪ್ರಮುಖ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಹೊಸ ವಿರೋಧಿಗಳು ಹುಟ್ಟಿಕೊಳ್ಳಬಹುದು. ಷೇರು ಮಾರುಕಟ್ಟೆಗೆ ಸಂಬಂಧಿಸಿದ ಜನರಿಗೆ ದಿನವು ಉತ್ತಮವಾಗಿರುತ್ತದೆ. ನಿಮ್ಮ ಹಣಕಾಸಿನ ವಿಚಾರದ ಬಗ್ಗೆ ನೀವು ಸಂಪೂರ್ಣ ಗಮನ ಹರಿಸಬೇಕು. ನಿಮ್ಮ ವರ್ತನೆಯಿಂದಾಗಿ ನಿಮ್ಮ ಕುಟುಂಬದ ಸದಸ್ಯರು ನಿಮ್ಮ ಬಗ್ಗೆ ಕೋಪ ಮಾಡಿಕೊಳ್ಳಬಹುದು.
ಕಟಕ ರಾಶಿ
ರಾಜಕೀಯದಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳಿಗೆ ಇಂದು ಉತ್ತಮ ದಿನವಾಗಿದೆ. ನಿಮ್ಮ ಒಳ್ಳೆಯ ಸ್ವಭಾವ ಮತ್ತೊಬ್ಬರಿಗೆ ಸ್ವಾರ್ಥದ ರೀತಿ ಕಾಣಬಹುದು. ಪ್ರೀತಿ ಪಾತ್ರರೊಂದಿಗೆ ದೂರದ ಊರಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಈ ಪ್ರಯಾಣ ನಿಮ್ಮಿಬ್ಬರನ್ನೂ ಒಬ್ಬರಿಗೊಬ್ಬರು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.
ಉತ್ತಮ ಸಂಬಂಧಗಳನ್ನು ಕಾಯ್ದುಕೊಳ್ಳಲು, ವಯಸ್ಸಾದ ಕಾಲದಲ್ಲಿ ನೆಮ್ಮದಿಯಾಗಿ ಬದುಕಲು ಕೌಟುಂಬಿಕ ವಿವಾದಗಳನ್ನು ನಿರ್ವಹಿಸಿದ ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ ಹಿರಿಯ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಶೀಲರವರು ಕೊಟ್ಟಿದ್ದಾರೆನ್ನುವ ಸಲಹೆಗಳು ಇಲ್ಲಿವೆ.
ಸಂಗಾತಿಯ ಚುಚ್ಚು ಮಾತುಗಳಿಂದ ನರಳಬೇಡಿ..!
.ಸಿಂಹ ರಾಶಿ
ಒಂದೇ ಬಾರಿಗೆ ಅನೇಕ ಕೆಲಸಗಳನ್ನು ನಿಭಾಯಿಸಬೇಕಿರುವುದರಿಂದ ಆತಂಕ ಹೆಚ್ಚಾಗುತ್ತದೆ. ಅಗತ್ಯ ವಸ್ತುಗಳನ್ನು ಖರೀದಿಸಲು ದುಬಾರಿ ಹಣ ವೆಚ್ಚ ಮಾಡಬೇಕಾಗುತ್ತದೆ. ಆದರೆ ಭವಿಷ್ಯದ ಬಗ್ಗೆ ಸ್ವಲ್ಪ ಯೋಚನೆ ಇರಲಿ. ಆತ್ಮೀಯರೊಂದಿಗೆ ಮಕ್ಕಳ ಮದುವೆ ಬಗ್ಗೆ ಚರ್ಚಿಸುವಿರಿ. ಸಮಾಜ ಸೇವೆಯಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ದತ್ತಿ ಕಾರ್ಯದಲ್ಲಿ ನೀವು ಸಕ್ರಿಯವಾಗಿ ಭಾಗವಹಿಸುತ್ತೀರಿ, ಇದು ನಿಮ್ಮ ಗೌರವವನ್ನು ಹೆಚ್ಚಿಸುತ್ತದೆ.
ಕನ್ಯಾ ರಾಶಿ
ಈ ರಾಶಿಯವರಿಗೆ ಇಂದು ಮಿಶ್ರ ಫಲ ದೊರೆಯಲಿದೆ. ಕುಟುಂಬದಲ್ಲಿ ಕೆಲವು ಶುಭ ಕಾರ್ಯಕ್ರಮಗಳನ್ನು ಆಯೋಜಿಸಬಹುದು. ಆಸ್ತಿ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ವ್ಯವಹರಿಸಬೇಕು, ಆಸ್ತಿ ಕೊಳ್ಳುವ ಸಂದರ್ಭ ಬಂದರೆ ಪ್ರಮುಖ ದಾಖಲೆಗಳ ವಿಚಾರದಲ್ಲಿ ಸಂಪೂರ್ಣ ಗಮನ ಹರಿಸಬೇಕಾಗುತ್ತದೆ. ನಿಮ್ಮ ಮನಸ್ಸು ಇತರ ವಿಷಯಗಳಲ್ಲಿ ಹೆಚ್ಚು ನಿರತವಾಗಿರುತ್ತದೆ, ಇದರಿಂದಾಗಿ ನಿಮ್ಮ ಬಹಳಷ್ಟು ಕೆಲಸಗಳು ವಿಳಂಬವಾಗಬಹುದು. ಕೌಟುಂಬಿಕ ಕಲಹ ಸ್ವಲ್ಪ ಮಟ್ಟಿಗೆ ತಿಳಿಯಾಗುತ್ತದೆ.
ತುಲಾ ರಾಶಿ
ತುಲಾ ರಾಶಿಯವರು ಆರ್ಥಿಕ ಲಾಭ ಪಡೆಯುವುದರಿಂದ ಅತ್ಯಂತ ಸಂತೋಷವಾಗಿರುತ್ತಾರೆ. ಇಷ್ಟು ದಿನಗಳು ನೀವು ಮುಚ್ಚಿಟ್ಟಿದ್ದ ವಿಚಾರ ನಿಮ್ಮ ಬಾಳ ಸಂಗಾತಿ ಮುಂದೆ ರಟ್ಟಾಗಬಹುದು. ಆದ್ದರಿಂದ ನಿಮ್ಮ ಯಾವುದೇ ವೈಯಕ್ತಿಕ ಮಾಹಿತಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದನ್ನು ನಿಲ್ಲಿಸಿ. ನಿಮ್ಮ ಮನೆಯಲ್ಲಿ ಕೆಲವು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಬಹುದು. ಮತ್ತೊಬ್ಬರಿಂದ ಪಡೆದ ಸಾಲವನ್ನು ಮರುಪಾವತಿ ಮಾಡುವಿರಿ.
ವೃಶ್ಚಿಕ ರಾಶಿ
ನಿಮ್ಮ ವ್ಯಾಪಾರ ಯೋಜನೆಗಳ ಬಗ್ಗೆ ನೀವು ಸಂಪೂರ್ಣ ಗಮನ ಹರಿಸಬೇಕು. ನಿಮಗೆ ದೊಡ್ಡ ಪ್ರಾಜೆಕ್ಟ್ ಒಂದು ದೊರೆಯಲಿದೆ. ಆದರೆ ಕೆಲವು ವಿರೋಧಿಗಳು ಅದನ್ನು ತಪ್ಪಿಸಲು ಬಹಳ ಪ್ರಯತ್ನ ಮಾಡುತ್ತಾರೆ. ನಿಮ್ಮ ಸಂಗಾತಿಯ ವೃತ್ತಿಗೆ ಸಂಬಂಧಿಸಿದಂತೆ ನೀವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ. ಕೆಲವು ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳಬಹುದು. ಅದೃಷ್ಟ ನಿಮ್ಮ ಪಾಲಿಗೆ ಇದೆ. ಇಂದು ಯಾವುದೇ ಕೆಲಸ ಆರಂಭಿಸಿದರೆ ಅದು ಯಶಸ್ವಿಯಾಗುತ್ತದೆ.
ಧನು ರಾಶಿ
ಇಂದು ತಮ್ಮ ಕೆಲಸದ ಬಗ್ಗೆ ಸಂಪೂರ್ಣ ಗಮನ ಹರಿಸಬೇಕಾಗುತ್ತದೆ. ಪರಸ್ಪರ ಸಹಕಾರದ ಭಾವನೆ ನಿಮ್ಮ ಮನಸ್ಸಿನಲ್ಲಿ ಉಳಿಯುತ್ತದೆ. ವ್ಯವಹಾರದಲ್ಲಿ ದೀರ್ಘಾವಧಿಯ ಯೋಜನೆಗಳು ವೇಗವನ್ನು ಪಡೆಯುತ್ತವೆ. ನೀವು ಬಹಳ ಸಮಯದ ನಂತರ ಹಳೆಯ ಸ್ನೇಹಿತರನ್ನು ಭೇಟಿಯಾಗುತ್ತೀರಿ. ಬಹಳ ದಿನಗಳಿಂದ ಬಾಕಿ ಉಳಿದಿರುವ ಕೆಲಸ ಇಂದು ಪೂರ್ಣಗೊಳ್ಳಲಿದೆ. ನಿಮಗೆ ಕೊಟ್ಟಿರುವ ಯಾವುದೇ ಜವಾಬ್ದಾರಿಯನ್ನು ಬೇರೆಯವರಿಗೆ ಬಿಟ್ಟುಕೊಡದಿರಿ. ಹಣಕಾಸಿನ ವಿಚಾರದಲ್ಲಿ ಎಚ್ಚರ.
ಮಕರ ರಾಶಿ
ಕೌಟುಂಬಿಕ ಕಲಹಗಳಿಗೆ ಎಲ್ಲರೂ ಒಟ್ಟು ಕುಳಿತು ಮಾತನಾಡುವ ಮೂಲಕ ಪರಿಹಾರ ಕಂಡುಕೊಳ್ಳಬೇಕು. ನೀವು ಸಾಲ ಪಡೆದವರ ಜೊತೆ ಸಂಬಂಧ ಹಾಳಾಗುವ ಸಾಧ್ಯತೆ ಇದೆ. ಯಾವುದೇ ವ್ಯವಹಾರವಾಗಲಿ ಮತ್ತೊಬ್ಬರನ್ನು ಅವಲಂಬಿಸುವುದನ್ನು ತಪ್ಪಿಸಿ. ಮಕ್ಕಳು ನಿಮ್ಮ ನಿರೀಕ್ಷೆಗೆ ತಕ್ಕಂತೆ ಬದುಕುತ್ತಾರೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಬಗ್ಗೆ ಸಂಪೂರ್ಣ ಗಮನ ಹರಿಸಬೇಕು.
ಕುಂಭ ರಾಶಿ
ವಾಹನಗಳನ್ನು ಬಳಸುವಾಗ ಜಾಗರೂಕರಾಗಿರಬೇಕು, ಇಲ್ಲದಿದ್ದರೆ ಅಪಾಯವಿದೆ. ನಿಮ್ಮ ವ್ಯವಹಾರದಲ್ಲಿ ಕೆಲವು ಏರಿಳಿತಗಳು ಸಂಭವಿಸುತ್ತದೆ. ಆದರೆ ಶ್ರಮ ವಹಿಸಿ ಕೆಲಸ ಮಾಡಿದಾಗ ಸಮಸ್ಯೆ ಪರಿಹಾರವಾಗುತ್ತದೆ. ಮತ್ತೊಬ್ಬರ ಮಾತುಗಳನ್ನು ಕೇಳಿ ಸಂಬಂಧವನ್ನು ಹಾಳು ಮಾಡಿಕೊಳ್ಳದಿರಿ. ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳುವಾಗ ಆತುರ ಬೇಡ, ಕುಟುಂಬದ ಹಿರಿಯರೊಂದಿಗೆ ಚರ್ಚಿಸಿ.
ಮೀನ ರಾಶಿ
ವಿವಿಧ ಮೂಲಗಳಿಂದ ಹಣ ಹರಿದುಬರಲಿದೆ. ಹೊಸ ಕೆಲಸವನ್ನು ಆರಂಭಿಸುತ್ತೀರಿ. ಕೆಲವೊಂದು ವಿಚಾರಗಳಿಗೆ ಮಕ್ಕಳೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಹೊಸ ವಾಹನ ಕೊಳ್ಳಲಿದ್ದೀರಿ. ವಿದ್ಯಾರ್ಥಿಗಳು ಹಿರಿಯರೊಂದಿಗೆ ಮಾತನಾಡಿ ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು, ಬಹಳ ವರ್ಷಗಳ ನಂತರ ನಿಮ್ಮ ಹಳೆಯ ಸ್ನೇಹಿತರೊಬ್ಬರು ನಿಮ್ಮನ್ನು ಭೇಟಿ ಮಾಡಲು ಬರಬಹುದು.
ಗಮನಿಸಿ: ಇಲ್ಲಿ ತಿಳಿಸಿರುವ ಮಾಹಿತಿಯು ಜ್ಯೋತಿಷ್ಯ ಶಾಸ್ತ್ರವನ್ನು ಆಧರಿಸಿದ್ದು, ನಿಮ್ಮ ನಂಬಿಕೆಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಿ. ಹೆಚ್ಚಿನ ಮಾಹಿತಿಗೆ ತಜ್ಞ ಜ್ಯೋತಿಷಿಗಳನ್ನು ಸಂಪರ್ಕಿಸಿ.



