ಇಂದು ಶನಿವಾರ, ಈ ದಿನ ಶನಿಶ್ಚೈರ, ಆಂಜನೇಯನನ್ನು ಆರಾಧಿಸಲಾಗುತ್ತದೆ. ಬಹಳಷ್ಟು ಕಡೆ ತಿರುಪತಿ ವೆಂಕಟೇಶ್ವರ, ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯನ್ನೂ ಪೂಜಿಸುತ್ತಾರೆ. ಈ ದಿನ 12 ರಾಶಿಗಳ ಭವಿಷ್ಯ ಹೇಗಿರಲಿದೆ? ಯಾರಿಗೆ ಶುಭ ಫಲ? ಯಾರಿಗೆ ಸಮಸ್ಯೆ? ಮೇಷ ರಾಶಿಯಿಂದ ಮೀನ ರಾಶಿಯವರೆಗೆ 14 ಡಿಸೆಂಬರ್ 2024ರ ದಿನ ಭವಿಷ್ಯ ನೋಡಿ.
ಮೇಷ ರಾಶಿ
ಇಂದು ಮೇಷ ರಾಶಿಯವರಿಗೆ ಸಾಮಾನ್ಯ ದಿನವಾಗಲಿದೆ. ದೂರದಲ್ಲಿರುವ ಕುಟುಂಬದ ಸದಸ್ಯರ ನೆನಪುಗಳು ನಿಮ್ಮನ್ನು ಕಾಡುತ್ತಿರಬಹುದು. ನಿಮ್ಮ ಅಗತ್ಯಗಳನ್ನು ಪೂರೈಸಲು ನೀವು ಹಣ ಖರ್ಚು ಮಾಡುತ್ತೀರಿ. ನಿಮ್ಮ ಕೆಲವು ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳದ ಕಾರಣ ನಿಮಗೆ ಖುಷಿ ಇರುವುದಿಲ್ಲ. ಕೆಲಸದ ಸ್ಥಳದಲ್ಲಿ ನಿಮ್ಮ ಕೆಲವು ವಿರೋಧಿಗಳನ್ನು ಎದುರಿಸಬೇಕಾಗುತ್ತದೆ, ಆದರೆ ವಾದ ವಿವಾದ, ಜಗಳ ಮಾಡದೆ ಸಮಾಧಾನದಿಂದಲೇ ಎಲ್ಲವನ್ನೂ ನಿಭಾಯಿಸಿ. ನಿಮ್ಮ ತಂದೆಯ ಬಳಿ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಅವಕಾಶ ದೊರೆಯಲಿದೆ.
ವೃಷಭ ರಾಶಿ
ನಿಮ್ಮ ವ್ಯಾಪಾರವು ಮೊದಲಿಗಿಂತ ಉತ್ತಮವಾಗಿ ನಡೆಯುತ್ತದೆ, ಇದರಿಂದ ನೀವು ಖುಷಿಯಾಗಿರುತ್ತೀರಿ. ಆದರೆ ನೀವು ಪಾಲುದಾರಿಕೆಯಲ್ಲಿ ಯಾವುದೇ ಕೆಲಸ ಮಾಡಬಾರದು. ನಿಮ್ಮ ಸಂಗಾತಿಯೊಂದಿಗೆ ಕೆಲವು ವಿಷಯದ ಬಗ್ಗೆ ನೀವು ಮನಸ್ತಾಪ ಹೊಂದಿರಬಹುದು. ನೀವು ಅವರನ್ನು ಅರ್ಥ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮ ಸ್ವಭಾವದಿಂದ ಅವರು ದುಃಖಗೊಳ್ಳಬಹುದು. ನಿಮ್ಮ ಮಕ್ಕಳ ಕಡೆಯಿಂದ ನೀವು ಕೆಲವು ಒಳ್ಳೆಯ ಸುದ್ದಿಯನ್ನು ಕೇಳಬಹುದು.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಇಂದು ಬಹಳ ಒತ್ತಡದ ದಿನವಾಗಿದೆ. ಪ್ರಯಾಣದಲ್ಲಿ ನೀವು ಕೆಲವು ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ನಿಮ್ಮ ಅನಗತ್ಯ ಖರ್ಚುಗಳನ್ನು ನೀವು ನಿಲ್ಲಿಸಬೇಕಾಗಿದೆ. ತಂದೆಯ ವಿಚಾರದಲ್ಲಿ ನಿಮಗೆ ಬೇಸರ ಉಂಟಾಗಬಹುದು. ಸಹೋದರಿಯರಿಂದ ಸಂಪೂರ್ಣ ಬೆಂಬಲ ಪಡೆಯುತ್ತೀರಿ. ನೀವು ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸಬಹುದು.
ಕಟಕ ರಾಶಿ
ಕಟಕ ರಾಶಿಯವರಿಗೆ ಇಂದು ಧನಾತ್ಮಕ ಫಲಿತಾಂಶಗಳನ್ನು ತರುತ್ತದೆ. ಆದರೆ ನಿಮ್ಮ ಕೆಲಸದ ಸ್ಥಳದಲ್ಲಿ ಕೆಲವು ಹೊಸ ವಿರೋಧಿಗಳು ಉದ್ಭವಿಸಬಹುದು. ವ್ಯಾಪಾರ ಮಾಡುವ ಜನರು ದೊಡ್ಡ ಟೆಂಡರ್ ಪಡೆಯಬಹುದು, ಇದು ಅವರ ವ್ಯವಹಾರಕ್ಕೆ ಉತ್ತಮ ಬೆಳವಣಿಗೆಯನ್ನು ನೀಡುತ್ತದೆ. ನಿಮ್ಮ ಆದಾಯದ ಮೂಲಗಳು ಹೆಚ್ಚಾಗುತ್ತವೆ. ನೀವು ಮಾಡುವ ಯಾವುದೇ ಕೆಲಸದಲ್ಲಿ ನೀವು ಯಶಸ್ಸು ಪಡೆಯುತ್ತೀರಿ.
ಉತ್ತಮ ಸಂಬಂಧಗಳನ್ನು ಕಾಯ್ದುಕೊಳ್ಳಲು, ವಯಸ್ಸಾದ ಕಾಲದಲ್ಲಿ ನೆಮ್ಮದಿಯಾಗಿ ಬದುಕಲು ಕೌಟುಂಬಿಕ ವಿವಾದಗಳನ್ನು ನಿರ್ವಹಿಸಿದ ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ ಹಿರಿಯ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಶೀಲರವರು ಕೊಟ್ಟಿದ್ದಾರೆನ್ನುವ ಸಲಹೆಗಳು ಇಲ್ಲಿವೆ.
ಸಂಗಾತಿಯ ಚುಚ್ಚು ಮಾತುಗಳಿಂದ ನರಳಬೇಡಿ..!
.ಸಿಂಹ ರಾಶಿ
ಇಂದು ಸಿಂಹ ರಾಶಿಯವರಿಗೆ ಆರ್ಥಿಕ ದೃಷ್ಟಿಯಿಂದ ಉತ್ತಮ ದಿನವಾಗಲಿದೆ. ಕೆಲಸಕ್ಕೆ ಸಂಬಂಧಿಸಿದಂತೆ ನೀವು ಯಾವುದೇ ಉದ್ವಿಗ್ನತೆಯನ್ನು ಎದುರಿಸುತ್ತಿದ್ದರೆ, ಅದು ನಂತರದ ದಿನಗಳಲ್ಲಿ ಸರಿ ಆಗಲಿದೆ. ಮಕ್ಕಳನ್ನು ನೀವು ಹೊರಗಿನ ಯಾವುದಾದರೂ ಕೋರ್ಸ್ಗೆ ಸೇರಿಸಲು ಬಯಸಿದರೆ ಅವರಿಗೆ ಪ್ರೋತ್ಸಾಹ ನೀಡಿ. ನೀವು ಯಾವುದೇ ಹಳೆಯ ಸಾಲವನ್ನು ಹೊಂದಿದ್ದರೆ ಅದನ್ನು ಮರುಪಾವತಿ ಮಾಡುವಿರಿ. ನೀವು ಕುಟುಂಬದ ಸದಸ್ಯರಿಗೆ ನೀಡಿರುವ ಭರವಸೆಯನ್ನು ಈಡೇರಿಸುವತ್ತ ಗಮನ ಹರಿಸಬೇಕು.
ಕನ್ಯಾ ರಾಶಿ
ಇಂದು ಕನ್ಯಾ ರಾಶಿಯವರಿಗೆ ಮಿಶ್ರ ದಿನವಾಗಲಿದೆ. ವ್ಯವಹಾರ ಸಂಬಂಧಿತ ವಿಷಯಗಳಲ್ಲಿ ಯಾವುದೇ ಅಪರಿಚಿತರನ್ನು ನಂಬಬೇಡಿ. ಕೆಲಸದ ಕ್ಷೇತ್ರದಲ್ಲಿ ನೀವು ಕೆಲವು ದೊಡ್ಡ ಜವಾಬ್ದಾರಿಯನ್ನು ಪಡೆಯಬಹುದು, ಈ ಕಾರಣದಿಂದಾಗಿ ನೀವು ಭಯಪಡಬೇಕಾಗಿಲ್ಲ. ನಿಮಗೆ ವಹಿಸಿರುವ ಜವಾಬ್ದಾರಿಯನ್ನು ಧೈರ್ಯದಿಂದ ಮಾಡಿ. ಕುಟುಂಬದ ಸದಸ್ಯರಿಗೆ ಮತ್ತೆ ಅನಾರೋಗ್ಯ ಸಮಸ್ಯೆ ಕಾಡಬಹುದು. ಅದು ನಿಮಗೆ ತೊಂದರೆ ಉಂಟುಮಾಡುತ್ತದೆ.
ತುಲಾ ರಾಶಿ
ತುಲಾ ರಾಶಿಯ ವ್ಯಾಪಾರಸ್ಥರಿಗೆ ಇಂದು ಉತ್ತಮ ದಿನವಾಗಲಿದೆ. ನಿಮ್ಮ ಇಚ್ಛೆಯಂತೆ ನೀವು ಅನುಕೂಲಗಳನ್ನು ಪಡೆಯಲಿದ್ದೀರಿ. ಕೌಟುಂಬಿಕ ಸಮಸ್ಯೆಗಳು ಕಾಡುವ ಸಾಧ್ಯತೆ ಇದೆ. ಆದರೆ ನೀವು ಮನೆಯಲ್ಲೇ ಇದ್ದು ಅವುಗಳನ್ನು ನಿಭಾಯಿಸಿದರೆ ಎಲ್ಲವೂ ಪರಿಹಾರವಾಗುತ್ತದೆ. ನಿಮ್ಮ ಸಂಗಾತಿ ನೀಡುವ ಸಲಹೆಯು ನಿಮಗೆ ಉಪಯುಕ್ತವಾಗಿರುತ್ತದೆ. ಉದ್ಯೋಗ ಹುಡುಕುತ್ತಿರುವವರು ಒಳ್ಳೆ ಸುದ್ದಿ ಕೇಳಬಹುದು. ಸಾಲ ತೆಗೆದುಕೊಂಡಿರುವವರಿಗೆ ಹಣವನ್ನು ವಾಪಸ್ ನೀಡಲಿದ್ದೀರಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಇಂದು ಮಿಶ್ರ ದಿನವಾಗಲಿದೆ. ನಿಮ್ಮ ಕೆಲಸದಲ್ಲಿ ಕುಟುಂಬದ ಸದಸ್ಯರು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ, ಆದರೆ ನೀವು ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳದಿರಿ. ರಾಜಕೀಯ ಕ್ಷೇತ್ರದಲ್ಲಿ ನಿಮಗೆ ವಿರೋಧಿಗಳು ಹುಟ್ಟಿಕೊಳ್ಳುತ್ತಾರೆ. ಕಚೇರಿಯಲ್ಲಿ ನೀವು ಟೀಮ್ ವರ್ಕ್ ಮೂಲಕ ಕೆಲಸ ಮಾಡಿದರೆ, ನೀವು ಯಾವುದೇ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಹಿರಿಯ ಸದಸ್ಯರು ನಿಮಗೆ ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ಸಲಹೆಗಳನ್ನು ನೀಡಬಹುದು.
ಧನು ರಾಶಿ
ಧನು ರಾಶಿಯವರಿಗೆ ಇಂದು ಖುಷಿಯ ದಿನವಾಗಿದೆ. ನಿಮ್ಮ ಸ್ನೇಹಿತರಲ್ಲಿ ಒಬ್ಬರು ಬಹಳ ಸಮಯದ ನಂತರ ನಿಮ್ಮನ್ನು ಭೇಟಿಯಾಗಲು ಬರಬಹುದು. ವಾಹನ ಚಲಾಯಿಸುವಾಗ ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ಯಾವುದೇ ಹೊಸ ಕೆಲಸ ಆರಂಭಿಸುವ ಮುನ್ನ ಅಡೆತಡೆ ಉಂಟಾಗಬಹುದು, ಆದರೆ ನೀವು ಅದಕ್ಕೆ ಭಯ ಪಡುವ ಅಗತ್ಯವಿಲ್ಲ. ನಿಮ್ಮ ಕೆಲಸದಲ್ಲಿ ಬುದ್ಧಿವಂತಿಕೆ ಉಪಯೋಗಿಸಿದರೆ ಖಂಡಿತ ನೀವು ಮುನ್ನಡೆ ಸಾಧಿಸಲಿದ್ದೀರಿ. ನೀವು ಬೇರೆ ಸ್ಥಳದಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಬಹುದು.
ಮಕರ ರಾಶಿ
ಮಕರ ರಾಶಿಯವರಿಗೆ ಇಂದು ಆದಾಯ ಮತ್ತು ಖರ್ಚು ಎರಡೂ ಸಮನಾಗಿರುತ್ತದೆ. ಆದರೂ ನೀವು ಗಮನ ಹರಿಸದಿದ್ದರೆ ವೆಚ್ಚಗಳು ಹೆಚ್ಚಾಗುತ್ತದೆ. ಆನ್ಲೈನ್ ವಂಚನೆಗೆ ಒಳಗಾಗುವ ಸಾಧ್ಯತೆ ಇದೆ ಎಚ್ಚರಿಕೆಯಿಂದ ಇರಿ. ದೂರದ ಕುಟುಂಬದ ಸದಸ್ಯರ ನೆನಪುಗಳು ನಿಮ್ಮನ್ನು ಕಾಡಬಹುದು. ನಿಮ್ಮ ತಂದೆಯೊಂದಿಗೆ ನೀವು ಟ್ರಿಪ್ ಹೋಗಬಹುದು. ಯಾವುದೇ ಕೆಲಸವಾದರೂ ನಾಳೆಗೆ ಮುಂದುಡುವುದನ್ನು ತಪ್ಪಿಸಿ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಇಂದು ಉತ್ತಮ ದಿನವಾಗಿದೆ. ಕುಟುಂಬದಲ್ಲಿ ಖುಷಿಯ ವಾತಾವರಣ ಇರಲಿದೆ. ನಿಮ್ಮ ಮನಸ್ಸಿನಲ್ಲಿ ಜನರ ಬಗ್ಗೆ ಪ್ರೀತಿ ಮತ್ತು ಸಹಕಾರದ ಭಾವನೆ ಇರುತ್ತದೆ. ನೀವು ಯಾವುದೇ ಕೆಲಸದಲ್ಲಿ ಆಲಸ್ಯದಿಂದ ದೂರವಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ದಿನ, ಮಕ್ಳಳು ಅವರಿಷ್ಟದ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ.
ಮೀನ ರಾಶಿ
ಮೀನ ರಾಶಿಯವರು ಕೆಲಸದ ಸ್ಥಳದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ನಿಮ್ಮ ಕೆಲಸದಲ್ಲಿ ಬೇರೆಯವರ ಸಲಹೆ ತೆಗೆದುಕೊಳ್ಳುವುದನ್ನು ನಿಲ್ಲಿಸಿ. ಇದರಿಂದ ನಿಮಗೆ ಸಮಸ್ಯೆ ಉಂಟಾಗಬಹುದು. ನೆರೆಹೊರೆಯವರ ಜೊತೆ ಮನಸ್ತಾಪ ಉಂಟಾಗಬಹುದು. ಸದಾ ಏನಾದರೂ ಹೊಸತನ್ನು ಮಾಡಲು ಪ್ರಯತ್ನಿಸುತ್ತಲೇ ಇರುವಿರಿ.
ಗಮನಿಸಿ: ಇಲ್ಲಿ ತಿಳಿಸಿರುವ ಮಾಹಿತಿಯು ಜ್ಯೋತಿಷ್ಯ ಶಾಸ್ತ್ರವನ್ನು ಆಧರಿಸಿದ್ದು, ನಿಮ್ಮ ನಂಬಿಕೆಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಿ. ಹೆಚ್ಚಿನ ಮಾಹಿತಿಗೆ ತಜ್ಞ ಜ್ಯೋತಿಷಿಗಳನ್ನು ಸಂಪರ್ಕಿಸಿ.



