ಹಾಸನಾಂಬೆ ದೇವಾಲಯದ ಗರ್ಭಗುಡಿ ತೆರೆದ ಬಳಿಕ ದೇವಿಯ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇವಿ ದರ್ಶನ ಮಾಡಿ ಪಾವನರಾಗುತ್ತಿದ್ದಾರೆ.
ಅ.25 ರಂದು ಗ್ರಹಣ ಹಿನ್ನೆಲೆಯಲ್ಲಿ ಸಾರ್ವಜನಿಕ ದರ್ಶನ ಇರುವುದಿಲ್ಲ. ಅ.26 ಬಲಿಪಾಡ್ಯಮಿ ದಿನದಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದರ್ಶನವಿದ್ದು, 4 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕರಿಗೆ ದರ್ಶನವಿರುತ್ತದೆ. ಅ.27 ರಂದು ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ ಮಧ್ಯಾಹ್ನದ ನಂತರ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಹಾಕಲಾಗುತ್ತದೆ ಎಂದು ದೇವಾಲಯದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
ವರ್ಷಕ್ಕೊಮ್ಮೆ ಆಶ್ವಯುಜ ಮಾಸದ ಹುಣ್ಣಿಮೆ ಕಳೆದ ನಂತರ ಬರುವ ಗುರುವಾರದಂದು ಬಾಗಿಲನ್ನು ತೆರೆಯಲಾಗುತ್ತದೆ ಮತ್ತು ಬಲಿಪಾಡ್ಯದ ಮೂರನೇ ದಿನ ಬೆಳಗ್ಗೆ ದೇವಸ್ಥಾನದ ಬಾಗಿಲನ್ನು ಮುಚ್ಚುತ್ತಾರೆ. ಈ ವರ್ಷ ಅಕ್ಟೋಬರ್ 13ರಿಂದ 27ರವರೆಗೆ ಹಾಸನಾಂಬ ಉತ್ಸವ ನಡೆಯುತ್ತಿದೆ.