ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ನವೆಂಬರ್ 11, 2022ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಕರ್ನಾಟಕದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆಗೊಳಿಸೋ ( Kempegowda statue unveiled ) ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ( PM Modi ) ನವೆಂಬರ್ 11, 2022ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿಯವರ ಭೇಟಿಯ ಸಂಪೂರ್ಣ ಕಾರ್ಯಕ್ರಮಗಳ ಪಟ್ಟಿ ಕೂಡ ಸಿದ್ಧಗೊಂಡಿದೆ. ನವೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವಂತ ಅವರನ್ನು ಸಚಿವರು ಸ್ವಾಗತಿಸಲಿದ್ದಾರೆ.
ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru Airport) 2ನೇ ಟರ್ಮಿನಲ್(T2) ಹಲವು ವಿಶೇಷಗಳನ್ನು ಹೊಂದಿದೆ. ಸುಮಾರು 5000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ 2ನೇ ಟರ್ಮಿನಲ್ನಿಂದಾಗಿ ವಿಮಾನ ನಿಲ್ದಾಣವು ವರ್ಷಕ್ಕೆ 6 ಕೋಟಿ ಪ್ರಯಾಣಿಕರನ್ನು ನಿರ್ವಹಣೆ ಮಾಡಲಿದೆ.


