ಒಂದಿಲ್ಲೊಂದು ಕಾರಣಕ್ಕೆ ರಶ್ಮಿಕಾ ಮಂದಣ್ಣ ಅವರು ಟ್ರೋಲ್ ಆಗುತ್ತಲೇ ಇರುತ್ತಾರೆ. ರಶ್ಮಿಕಾ ಮಂದಣ್ಣ ಬಹಿರಂಗ ಪತ್ರ ಬರೆದಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಈ ಕುರಿತು ಅವರು ಪೋಸ್ಟ್ ಮಾಡಿದ್ದಾರೆ. ತಮಗೆ ತೊಂದರೆ ನೀಡಿದ ಮತ್ತು ಮನಸ್ಸಿಗೆ ನೋವು ಮಾಡಿದವರ ಬಗ್ಗೆ ಅವರು ವಿವರವಾಗಿ ತಿಳಿಸಿದ್ದಾರೆ. ಈ ವಿಚಾರದ ಬಗ್ಗೆ ಇಷ್ಟು ದಿನ ಮೌನವಾಗಿದ್ದ ರಶ್ಮಿಕಾ ಈಗ ಎಲ್ಲವನ್ನೂ ಹೇಳಿಕೊಂಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ನನಗೆ ಕೆಲವು ವಿಚಾರಗಳು ಸಾಕಷ್ಟು ತೊಂದರೆ ನೀಡಿವೆ. ಈ ಬಗ್ಗೆ ನಾನು ಮೊದಲೇ ಮಾತನಾಡಬೇಕಿತ್ತು’ ಎಂದು ರಶ್ಮಿಕಾ ಮಂದಣ್ಣ ಅವರು ಬರಹ ಆರಂಭಿಸಿದ್ದಾರೆ. ‘ವೃತ್ತಿ ಜೀವನ ಆರಂಭ ಆದಾಗಿನಿಂದಲೂ ನನ್ನನ್ನು ದ್ವೇಷಿಸಲಾಗುತ್ತಿದೆ. ಟ್ರೋಲ್ ಮತ್ತು ನೆಗೆಟಿವಿಟಿಗೆ ನಾನು ಪಂಜಿಂಗ್ ಬ್ಯಾಗ್ ರೀತಿ ಆಗಿದ್ದೇನೆ. ನಾನು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರ ಹಾಗಿದೆ.

ಎಲ್ಲರೂ ನನ್ನನ್ನು ಪ್ರೀತಿಸಲೇಬೇಕು ಅಂತೇನಿಲ್ಲ. ನನ್ನ ಬಗ್ಗೆ ನಿಮಗೆ ಸಹಮತ ಇಲ್ಲ ಎಂದಮಾತ್ರಕ್ಕೆ ನೀವು ನೆಗೆಟಿವಿಟಿ ಹಬ್ಬಿಸಬಹುದು ಅಂತ ಅರ್ಥವಲ್ಲ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. ‘ನಿಮ್ಮೆಲ್ಲರನ್ನು ರಂಜಿಸಲು ನಾನು ಸತತ ಶ್ರಮಪಡುತ್ತಿದ್ದೇನೆ. ಆ ಕೆಲಸದ ಬಗ್ಗೆ ನಾನು ಹೆಚ್ಚು ಯೋಚಿಸುತ್ತೇನೆ. ನಾನು ಮತ್ತು ನೀವು ಇಬ್ಬರೂ ಹೆಮ್ಮೆ ಪಡುವಂತಹ ಕೆಲಸ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ. ನಾನು ಹೇಳಿಲ್ಲದೇ ಇರುವ ವಿಚಾರಕ್ಕೆ ನನ್ನನ್ನು ಟ್ರೋಲ್ ಮಾಡುತ್ತಿರುವುದು ನಿಜಕ್ಕೂ ನೋವಿನ ಸಂಗತಿ’ ಎಂದು ರಶ್ಮಿಕಾ ಅವರು ತಮ್ಮ ಬೇಸರ ತೋಡಿಕೊಂಡಿದ್ದಾರೆ.
ಆರಂಭದಲ್ಲಿ ಹೇಗೆ ನಿಮ್ಮನ್ನು ನಾನು ಪ್ರೀತಿಸುತ್ತಿದ್ದೆ ಅದೇ ರೀತಿ ಪ್ರೀತಿ ಮಾಡುತ್ತೀನಿ. ಶ್ರಮದಿಂದ ಕೆಲಸ ಮಾಡಿ ಒಳ್ಳೆ ವ್ಯಕ್ತಿಯಾಗಿ ಗುರುತಿಸಿಕೊಳ್ಳುತ್ತೀನಿ. ನಾನು ಹೇಳಿದ ಹಾಗೆ ನೀವು ಖುಷಿಯಾಗಿದ್ದರೆ ನಾನು ಖುಷಿಯಾಗಿರುವೆ’ ಎಂದಿದ್ದಾರೆ ರಶ್ಮಿಕಾ ಮಂದಣ್ಣ. ಸಂದರ್ಶನಗಳಲ್ಲಿ ನಾನು ಹೇಳಿದ್ದನ್ನು ನನ್ನ ವಿರುದ್ಧವೇ ತಿರುಗಿಸಲಾಗಿದೆ. ನನಗೆ ಮತ್ತು ನನ್ನ ಸಂಬಂಧಗಳಿಗೆ ಹಾನಿ ಆಗುವಂತಹ ತಪ್ಪು ಕಥೆಗಳನ್ನು ಇಂಟರ್ನೆಟ್ನಲ್ಲಿ ಹರಡಿಸಲಾಗಿದೆ. ಒಳ್ಳೆಯ ಟೀಕೆಯನ್ನು ನಾನು ಸ್ವಾಗತಿಸುತ್ತೇನೆ. ಅದರಿಂದ ಬೆಳವಣಿಗೆ ಸಾಧ್ಯ. ಆದರೆ ನೆಗೆಟಿವಿಟಿ ಮತ್ತು ದ್ವೇಷದಿಂದ ಏನು ಸಾಧ್ಯ’ ಎಂದು ರಶ್ಮಿಕಾ ಪ್ರಶ್ನಿಸಿದ್ದಾರೆ.
ನನ್ನ ವೃತ್ತಿ ಜೀವನ ಆರಂಭಿಸಿದ ಕ್ಷಣದಿಂದಲ್ಲೂ ನಾನು ತುಂಬಾನೇ hate ಸ್ವೀಕರಿಸುತ್ತಿರುವೆ. ಅಕ್ಷರಶಃ ಪಂಚಿಂಗ್ ಬ್ಯಾಗ್, ಎಷ್ಟು ಟ್ರೋಲ್ಗಳು ಎಷ್ಟು ನೆಗೆಟಿವಿಟಿ.ನಾನು ಆಯ್ಕೆ ಮಾಡಿಕೊಂಡಿರುವ ಜೀವನಕ್ಕೆ ಬೆಲೆ ಇದೆ ಎಂದು ನನಗೆ ಗೊತ್ತಿದೆ ಹೀಗಾಗಿ ನಾನು everyone’s cup of tea ಅಲ್ಲ ಅನ್ನೋ ವಿಚಾರ ಸ್ಪಷ್ಟವಾಗಿ ಗೊತ್ತಿದೆ, ಪ್ರತಿಯೊಬ್ಬರೂ ನನ್ನನ್ನು ಪ್ರೀತಿಸಬೇಕು ಎಂದು ನಿರೀಕ್ಷೆ ಮಾಡುತ್ತಿಲ್ಲ. ನನ್ನನ್ನು ಒಪ್ಪಿಕೊಂಡಿಲ್ಲ ಅಂದ ಮಾತ್ರಕ್ಕೆ ನೀವು ನೆಗೆಟಿವಿಟಿ ಕೊಡಬೇಕು ಅಂತಲ್ಲ.
ನಾನು ಮಾಡುವ ಕೆಲಸದ ಬಗ್ಗೆ ನನಗೆ ಮಾತ್ರ ಗೊತ್ತಿದೆ, ದಿನ ಬೆಳಗ್ಗೆಯಿಂದ ರಾತ್ರಿವರೆಗೂ ಶ್ರಮಿಸಿ ನಿಮ್ಮನ್ನು ನಗಿಸುವೆ. ನನ್ನ ಬಗ್ಗೆ ನಾನು ಕೇರ್ ಮಾಡುವುದು ಒಂದೇ ವಿಚಾರ ಕೆಲಸವನ್ನು ಮನಸ್ಸಿನಿಂದ ಸಂತೋಷದಿಂದ ಕೆಲಸ ಮಾಡುವುದು. ಅತಿ ಹೆಚ್ಚು ಶ್ರಮ ವಹಿಸಿ ನನ್ನ ಬೆಸ್ಟ್ ನೀಡುತ್ತಿರುವೆ ಇದರ ಬಗ್ಗೆ ನಿಮಗೆ ಮಾತ್ರವಲ್ಲ ನನಗೂ ಹೆಮ್ಮೆ ಇದೆ’ ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಈ ಬರಹ ವೈರಲ್ ಆಗಿದೆ. ದುಲ್ಕರ್ ಸಲ್ಮಾನ್, ತಾನ್ಯಾ ಹೋಪ್ ಮುಂತಾದ ಸೆಲೆಬ್ರಿಟಿಗಳು ಇದಕ್ಕೆ ಕಮೆಂಟ್ ಮಾಡಿದ್ದಾರೆ. ಆ ಮೂಲಕ ರಶ್ಮಿಕಾಗೆ ಬೆಂಬಲ ನೀಡಿದ್ದಾರೆ.



