ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಈಗ ಅಧಿಕಾರಕ್ಕೆ ಬಂದ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತಿದೆ. ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಯೋಜನೆಯೇ ಗೃಹಲಕ್ಷ್ಮೀ ಯೋಜನೆ. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯಾಗಲು ಅರ್ಹರಾಗಿರುತ್ತಾರೆ.

ಈ ಯೋಜನೆಯ ಲಾಭ ಪಡೆಯಲು ಮನೆಯೊಡತಿಯ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಅನ್ನು ಜೋಡಣೆ ಮಾಡಿರಲೇಬೇಕು. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕರಿಸುವ ಪ್ರಕ್ರೀಯೆ ಜುಲೈ 14 ರಂದು ಆರಂಭವಾಗಲಿದೆ. ಆಗಸ್ಟ 16 ರಂದು ಫಲಾನುಭವಿಗಳ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಹಣ ಜಮೆ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಈ ಯೋಜನೆಗಾಗಿ ಅರ್ಜಿ ಸ್ವೀಕರಿಸಲು ಅನುಕೂಲವಾಗುವಂತೆ ಪ್ರತಿ ಜಿಲ್ಲೆಯಲ್ಲಿ 50 ರಿಂದ 100 ಜನರನ್ನು ಪ್ರಜಾಪ್ರತಿನಿಧಿಗಳು ಎಂದು ನೇಮಿಸಲಾಗುತ್ತದೆ.
ಇದರ ಜವಾಬ್ದಾರಿಯನ್ನು ಜಿಲ್ಲೆಯ ವಸ್ತುವಾರಿ ಸಚಿವರಿಗೆ ವಹಿಸಲಾಗುವುದು ಅನ್ನೊ ಮಾಹಿತಿಯಿದೆ. ಈ ಯೋಜನೆಯ ಅನುಷ್ಟಾನಕ್ಕೆ ಬೇಕಾದಂತ ಗೃಹಲಕ್ಷಿ ಆಪ್ ನ್ನು ಈಗಾಗಲೆ ಸಿದ್ದ ಪಡಿಸಲಾಗಿದ್ದು ಪ್ರತಿನಿಧಿಗಳಾಗಿ ನೇಮಕಗೊಂಡವರು ಆಪ್ ಗೆ ಲಾಗಿನ್ ಆಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು ರೇಷನ್ ಕಾರ್ಡ್ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳನ್ನು ಅಪ್ಲೋಡ್ ಮಾಡಲಿದ್ದಾರೆ ಎನ್ನಲಾಗಿದೆ ಬಳಿಕ ಅಪ್ಲಿಕೇಶನ್ ನ ಕಾಪಿಯನ್ನು ಫಲಾನುಭವಿಗಳಿಗೆ ತಲುಪಿಸಲಿದ್ದಾರೆ.
ಆನ್ ಲೈನ್ ಅಥವಾ ಆಫ್ ಲೈನ್ ಎರಡೂ ವಿಧಾನದಿಂದ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಬಹುದು. ಮನೆಯಲ್ಲಿ ಅತ್ತೆ ಅಥವಾ ಸೊಸೆ ಇಬ್ಬರಲ್ಲಿ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮನೆ ಯಜಮಾನಿ ಕೆಲವು ಅಗತ್ಯ ಮಾಹಿತಿಗಳನ್ನು ಕಡ್ಡಾಯವಾಗಿ ನೀಡಬೇಕು. ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ನಂಬರ್, ಬ್ಯಾಂಕ್ ಪಾಸ್ಬುಕ್ಗಳನ್ನು ಅರ್ಜಿ ಜೊತೆ ಸಲ್ಲಿಸಬೇಕು.ಕುಟುಂಬದ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಅರ್ಜಿ ಜೊತೆ ಲಗತ್ತಿಸಬೇಕು.