ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಮೇಲ್ಪಾಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು 80ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಸುಸರ್ಜಿತ ಕೊಠಡಿಗಳ ಉದ್ಘಾಟನೆಯನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಟಿ.ಡಿ ರಾಜೇಗೌಡ ಅವರೊಂದಿಗೆ ನೆರವೇರಿಸಲಾಯಿತು.

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದೆನು. ಚಿಕ್ಕಮಗಳೂರು ಜಿಲ್ಲೆಗೆ 15 ಕೆ.ಪಿ.ಎಸ್ ಶಾಲೆಗಳನ್ನು ನೀಡಲಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದ್ದು, ಅದರಂತೆ ಮಧ್ಯಾಹ್ನದ ಬಿಸಿಯೂಟ, ಕೆನೆಭರಿತ ಹಾಲು, ರಾಗಿಮಾಲ್ಟ್, ಉಚಿತ ಶೂ-ಸಾಕ್ಸ್ ಹೀಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ.
ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೂರು ಪರೀಕ್ಷೆಗಳನ್ನು ಜಾರಿಗೆ ತಂದಿದ್ದು, ಅಂಕಗಳನ್ನು ಹೆಚ್ಚು ಮಾಡಿಕೊಳ್ಳಲು ಈ ಯೋಜನೆ ಸಹಕಾರಿಯಾಗಿದೆ. ರಾಜ್ಯದಲ್ಲಿ ಸುಮಾರು 51 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ಗುರಿ ಸಾಧಿಸಿದ್ದಾರೆ.

ದ್ವಿತೀಯ ಪಿಯುಸಿ ಮಕ್ಕಳಿಗೆ ಉಚಿತವಾಗಿ CET/NEET/JEE ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ. ಈ ಯೋಜನೆಯಿಂದ ಅನೇಕ ವಿದ್ಯಾರ್ಥಿಗಳಿಗೆ ಅನುಕೂಲವಾಗಿದ್ದು ಕೆಲ ವಿದ್ಯಾರ್ಥಿಗಳು ಐಐಟಿ ಯಲ್ಲಿ ಪ್ರವೇಶ ಪಡೆದಿದ್ದಾರೆ. ಇದು ಶಿಕ್ಷಣ ಇಲಾಖೆಯ ಪ್ರಗತಿ ಹಾಗೂ ಸಾಧನೆಯಾಗಿದೆ.
ಶಿಕ್ಷಣ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು. ಆದರೆ ಮಕ್ಕಳಿಗೆ ತೊಂದರೆಯಾಗಬಾರದು ಎಂದು ಸುಮಾರು 51,000 ಅತಿಥಿ ಶಿಕ್ಷಕರನ್ನು ಒಮ್ಮೆಲೇ ನಮ್ಮ ಸರ್ಕಾರ ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದೆನು.
ಸಮಾರಂಭದಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಡಾ. ಅಂಶುಮಂತ್, ಕರ್ಕೇಶ್ವರ ಗ್ರಾ.ಪಂ ಸದಸ್ಯರುಗಳು, ಜನಪ್ರತಿನಿಧಿಗಳು, ಮುಖಂಡರು, ಶಾಲಾ ಸಿಬ್ಬಂದಿ ವರ್ಗದವರು ಹಾಗೂ ಎಸ್.ಡಿ.ಎಂ.ಸಿ ಸದಸ್ಯರುಗಳು ಹಾಜರಿದ್ದರು.



