ಮುರುಘಾ ಶ್ರೀ ವಿರುದ್ಧ 2ನೇ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆ ಪ್ರಭಾರ ಪೀಠಾಧ್ಯಕ್ಷರ ನೇಮಕಕ್ಕೆ ನಿರ್ಧಾರ ಮಾಡಲಾಗಿದೆ. ಮುರುಘಾಮಠಕ್ಕೆ ಪ್ರಭಾರ ಪೀಠಾಧ್ಯಕ್ಷರ ನೇಮಕಕ್ಕೆ ದಾವಣಗೆರೆ ವಿರಕ್ತ ಮಠದ ಬಸವಪ್ರಭುಶ್ರೀ ಹೆಸರು ಅಂತಿಮ ಮಾಡಲಾಗಿದೆ.
ಜೈಲಿನಲ್ಲೇ ಇದ್ದು, ಬಸವಪ್ರಭ ಶ್ರೀಗಳ ಹೆಸರನ್ನು ಮುರುಘಾ ಶ್ರೀ ಸೂಚಿಸಿದ್ದಾರೆ ಎಂದು ಚಿತ್ರದುರ್ಗ ಮುರುಘಾಮಠದ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಮುರುಘಾ ಶ್ರೀ, ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರು ಹಾಗೂ ಕೆಲ ಮುಖಂಡರ ಜೊತೆ ಚರ್ಚಿಸಿ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಜೈಲಿನಿಂದ ಬಿಡುಗಡೆ ಆದ ಬಳಿಕ ಮತ್ತೆ ಪೀಠ ಬಿಟ್ಟು ಕೊಡಬೇಕು ಎಂಬ ಷರತ್ತು ವಿಧಿಸಿದ್ದಾರೆ ಎಂದು ಹೇಳಲಾಗ್ತಿದೆ. ಮುರುಘಾ ಶ್ರೀಗಳ ಕೇಸ್ ಖರ್ಚು ವೆಚ್ಚ ಮತ್ತು ಬೇರೆ ಖರ್ಚು ಭರಿಸುವ ಷರತ್ತು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಸವಪ್ರಭು ಶ್ರೀ ಹೆಸರು ಅಂತಿಮವಾಗುತ್ತಿದ್ದಂತೆ ಇದಕ್ಕೆ ವಿರೋಧ ಸಹ ವ್ಯಕ್ತವಾಗುತ್ತಿದೆ. ಇದಕ್ಕೆ ಮುರುಘಾ ಮಠದಲ್ಲಿ ದೀಕ್ಷೆ ಪಡೆದ ಸ್ವಾಮೀಜಿಗಳು ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಲಿಂಗಾಯತ ಮಠಾಧೀಶರು ಕೆಲವೇ ಕ್ಷಣಗಳಲ್ಲಿ ಈ ಸಂಬಂಧ ಗೌಪ್ಯ ಸಭೆ ನಡೆಸಲಿದ್ದಾರೆ ಎನ್ನಲಾಗ್ತಿದೆ.