ಪರ ಭಾಷಿಗರಿಗೆ ಕನ್ನಡವನ್ನು ಕಲಿಸಲು ಇಲ್ಲೊಬ್ಬ ಆಟೋ ಚಾಲಕ ವಿನೂತನ ಪ್ರಯತ್ನವೊಂದಕ್ಕೆ ಕೈ ಹಾಕಿದ್ದು, ಈ ಕುರಿತ ಪೋಸ್ಟ್ ಒಂದು ಇದೀಗ ಸಖತ್ ವೈರಲ್ ಆಗುತ್ತಿದೆ.ಪರ ಭಾಷಿಗರಿಗೆ ಸ್ವಲ್ಪವಾದರೂ ಕನ್ನಡ ಭಾಷೆಯಲ್ಲಿ ಕಲಿಸಲು ಇಲ್ಲೊಬ್ಬ ಆಟೋ ಚಾಲಕ ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಈ ಕುರಿತ ಪೋಸ್ಟ್ ಒಂದು ಇದೀಗ ಸಖತ್ ವೈರಲ್ ಆಗುತ್ತಿದೆ.
ಬೆಂಗಳೂರಿನ ಆಟೋ ಚಾಲಕರೊಬ್ಬರು ಈ ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದು, ʼಲರ್ನ್ ಕನ್ನಡ ವಿತ್ ಆಟೋ ಕನ್ನಡಿಗʼ ಎಂಬ ವಿಶಿಷ್ಟ ಕಾನ್ಸೆಪ್ಟ್ ಮೂಲಕ ಪರ ಭಾಷಿಗರಿಗೆ ಕೆಲವೊಂದು ಬೇಸಿಕ್ ಕನ್ನಡ ಪದಗಳನ್ನು ಕಲಿಸುವಂತಹ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಆಟೋದಲ್ಲಿ ಮಾತನಾಡುವಂತಹ ಕೆಲವೊಂದು ಬೇಸಿಕ್ ಪದಗಳನ್ನು ಇಂಗ್ಲೀಷ್ ಹಾಗೂ ಕನ್ನಡ ಎರಡೂ ಭಾಷೆಯಲ್ಲಿ ಪ್ರಿಂಟ್ ಮಾಡಿಸಿ ತಮ್ಮ ಆಟೋದಲ್ಲಿ ಅಂಟಿಸಿದ್ದಾರೆ. ಈ ಮೂಲಕ ಅನ್ಯ ಭಾಷಿಗರು ಆಟೋ ಚಾಲಕರ ಜೊತೆ ಸುಲಭವಾಗಿ ಕನ್ನಡದಲ್ಲಿಯೇ ವ್ಯವಹರಿಸಬಹುದಾಗಿದೆ.
very handy pic.twitter.com/RqC6lTpwuq
— Vatsalya (@vatsalyatandon) October 21, 2024
ಈ ಕುರಿತ ಪೋಸ್ಟ್ ಒಂದನ್ನು vatsalyatandon ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ಫೋಟೋದಲ್ಲಿ ಪರಭಾಷಿಗರಿಗೆ ಕನ್ನಡ ಕಲಿಸುವ ಸಲುವಾಗಿ ಲರ್ನ್ ಕನ್ನಡ ವಿತ್ ಆಟೋ ಕನ್ನಡಿಗ ಎಂದು ಆಟೋವೊಂದರಲ್ಲಿ ಸಣ್ಣ ಬೋರ್ಡ್ ಒಂದನ್ನು ಹಾಕಿರುವ ದೃಶ್ಯವನ್ನು ಕಾಣಬಹುದು.
ನಿನ್ನೆ ಮುಂಜಾನೆ ಹಂಚಿಕೊಳ್ಳಲಾದ ಈ ಪೋಸ್ಟ್ 8 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದಂತೂ ತುಂಬಾನೇ ಒಳ್ಳೆಯ ಐಡಿಯಾʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆಟೋ ಚಾಲಕನ ಈ ಪ್ರಯತ್ನಕ್ಕೆ ಮೆಚ್ಚುಗೆ ಕೊಡಲೇ ಬೇಕುʼ ಎಂದು ಹೇಳಿದ್ದಾರೆ.