ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ಇತ್ತೀಚಿಗೆ ನಡೆದ ಆರ್ಯವೀರ್ ಮತ್ತು ವೀರಾಂಗನಾ ಸಮಾವೇಶದಲ್ಲಿ ಮಾತನಾಡಿದ ಯೋಗ ಗುರು ಬಾಬಾ ರಾಮ್ದೇವ್ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಶಾರುಖ್ ಪುತ್ರ ಆರ್ಯನ್ ಖಾನ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಬಾಬಾ ರಾಮ್ದೇವ್ ಡ್ರಗ್ಸ್ ಮುಕ್ತ ದೇಶದ ಬಗ್ಗೆ ಮಾತನಾಡುತ್ತಾ ಹಲವಾರು ಬಾಲಿವುಡ್ ತಾರೆಯರನ್ನು ತರಾಟೆ ತೆಗೆದುಕೊಂಡರು. ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಶಾರುಖ್ ಪುತ್ರ ಆರ್ಯನ್ ಖಾನ್ ವಿರುದ್ಧ ಡ್ರಗ್ಸ್ ಸೇವಿಸುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಕಳೆದ ವರ್ಷ ಡ್ರಗ್ಸ್ ಪ್ರಕರಣದಲ್ಲಿ ಶಾರುಖ್ ಪುತ್ರ ಆರ್ಯನ್ ಖಾನ್ ಜೈಲು ಸೇರಿದ್ದರು. ಈ ಬಗ್ಗೆ ಮಾತನಾಡಿದ ರಾಮ್ ದೇವ್ ಕಳೆದ ವರ್ಷ ಡ್ರಗ್ಸ್ ಪ್ರಕರಣದಲ್ಲಿ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಅನ್ನು ಹೇಗೆ ಬಂಧಿಸಲಾಯಿತು ಎಂದು ಪ್ರಸ್ತಾಪಿಸಿದರು.ಸಲ್ಮಾನ್ ಖಾನ್ ಡ್ರಗ್ಸ್ ಸೇವಿಸುತ್ತಾರೆ, ಆದರೆ ಆಮೀರ್ ಖಾನ್ ಬಗ್ಗೆ ತನಗೆ ಖಚಿತ ಮಾಹಿತಿ ಇಲ್ಲ ಎಂದು ಹೇಳಿದರು.
ಚಿತ್ರರಂಗದಲ್ಲಿ ಡ್ರಗ್ಸ್ ಇದೆ. ರಾಜಕೀಯದಲ್ಲೂ ಡ್ರಗ್ಸ್ ಇದೆ. ಚುನಾವಣೆ ಸಮಯದಲ್ಲಿ ಮದ್ಯ ಹಂಚಲಾಗುತ್ತದೆ. ಭಾರತ ಮಾದಕ ವಸ್ತು ವ್ಯಸನದಿಂದ ಮುಕ್ತವಾಗಬೇಕು ಎಂಬ ನಿರ್ಣಯ ನಾವು ತೆಗೆದುಕೊಳ್ಳಬೇಕು. ಇದಕ್ಕಾಗಿ ಆಂದೋಲನ ನಡೆಸುತ್ತೇವೆ’ ಎಂದು ಬಾಬಾ ರಾಮ್ದೇವ್ ಹೇಳಿದರು.
ಸದ್ಯ ರಾಮ್ದೇವ್ ಹೇಳಿಕೆಗೆ ನಾನಾ ರೀತಿಯಲ್ಲಿ ಕಮೆಂಟ್ಗಳು ಬರುತ್ತಿವೆ. ‘ರಾಮ್ದೇವ್ ಅವರು ಸತ್ಯವನ್ನು ಧೈರ್ಯದಿಂದ ಹೇಳಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ಅವರ ಹೇಳಿಕೆಯನ್ನು ವಿರೋಧಿಸಿದ್ದಾರೆ. ‘ಸಾಕ್ಷ್ಯ ಇಲ್ಲದೆ ಈ ರೀತಿ ಹೇಳಿಕೆ ನೀಡೋದು ಎಷ್ಟು ಸರಿ’ ಎಂದು ಪ್ರಶ್ನೆ ಮಾಡಿದ್ದಾರೆ