ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಲ್ಲಿ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್ಬಿಐ) ನಿರ್ದೇಶಕರಾಗಿ ಕಶ್ಯಪ್ ಪ್ರಮೋದ್ ಪಟೇಲ್ ಅಧಿಕಾರ ಸ್ವೀಕರಿಸಿದ್ದಾರೆ. ಇದರಲ್ಲಿ ವಿಶೇಷತೆ ಏನಪ್ಪ ಎಂದರೆ ಭಾರತದಲ್ಲಿ ಪವಿತ್ರ ಗ್ರಂಥವೆಂದು ಪರಿಗಣಿಸಲ್ಪಡುವ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾರತದಿಂದ ದೂರವಿದ್ದರು ಸಹ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಎತ್ತಿಹಿಡಿದಿರುವುದು ಹೆಮ್ಮೆಯ ಸಂಗತಿಯಾಗಿದೆ.
ಶುಕ್ರವಾರ ಶ್ವೇತ ಭವನದ ಐಸೆನ್ಹೋವರ್ ಕಾರ್ಯನಿರ್ವಾಹಕ ಕಚೇರಿ ಕಟ್ಟಡದಲ್ಲಿರುವ ಭಾರತೀಯ ಒಪ್ಪಂದ ಕೊಠಡಿಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜರುಗಿತು. ಕಾಶ್ ಪಟೇಲರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಶ್ ಅವರ ಗೆಳತಿ ಅಲೆಕ್ಸಿಸ್ ವಿಲ್ಕಿನ್ಸ್ ಭಗವದ್ಗೀತೆಯನ್ನು ಹಿಡಿದಿದ್ದು, ಅದರ ಮೇಲೆ ತಮ್ಮ ಹಸ್ತವನ್ನು ಇರಿಸಿ ಯುನೈಟೆಡ್ ಸ್ಟೇಟ್ಸ್ನ ಒಂಬತ್ತನೇ ಎಫ್ಬಿಐ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಕಶ್ಯಪ್ ಪ್ರಮೋದ್ ಪಟೇಲ್ ಆದ ನಾನು, ದೇಶ ಹಾಗೂ ವಿದೇಶದ ಎಲ್ಲಾ ಶತ್ರುಗಳ ವಿರುದ್ಧವಾಗಿ ಸಯುಕ್ತ ಅಮೆರಿಕಾದ ಸಂವಿಧಾನವನ್ನು ಬೆಂಬಲಿಸಿ, ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುತ್ತೀನಿ ಎಂದು ಪ್ರತಿಜ್ಞೆ ಮಾಡುತ್ತೇನೆ. ನಾನು ಸೇರಲಿರುವ ಹುದ್ದೆಯ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ. ನನ್ನ ಕರ್ತವ್ಯ ನಿಭಾಯಿಸಲು ನನಗೆ ದೇವರೇ ಸಹಾಯ ಮಾಡು ಎಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಾಶ್ ಪಟೇಲ್ ಯಾರು…?
ಕಾಶ್ ಪಟೇಲ್ ತಂದೆ-ತಾಯಿ ಗುಜರಾತ್ ಮೂಲದವರಾಗಿದ್ದು, ಪಟೇಲ್ ಪೋಷಕರು ಅಮೆರಿಕಾದಲ್ಲಿ ನೆಲೆಸುವುದಕ್ಕಿಂತ ಮೊದಲು ಉಗಾಂಡದಲ್ಲಿದ್ದರು. ನಂತರ ಕೆನಡಾಗೆ ಬಂದರು. ಈ ವೇಳೆ ಕಾಶ್ ಪಟೇಲ್ ತಂದೆಗೆ ಅಮೆರಿಕ ವಿಮಾನಯಾನ ಸಂಸ್ಥೆಯಲ್ಲಿ ಹಣಕಾಸು ಅಧಿಕಾರಿಯಾಗಿ ಕೆಲಸ ಸಿಕ್ಕಿದ್ದರಿಂದ ಅವರು ಕುಟುಂಬ ಸಮೇತರಾಗಿ ಅಮೆರಿಕಾಗೆ ಬಂದು ನೆಲೆಸಿದ್ದರು. ನ್ಯೂಯಾರ್ಕ್ನ ಗಾರ್ಡನ್ ಸಿಟಿಯಲ್ಲಿ ಜನಿಸಿದ್ದು, ಅಲ್ಲಿಯೇ ಕಾಲೇಜು ಶಿಕ್ಷಣ ಪಡೆದರು. ನಂತರ ರಚ್ಚಂಡ್ ವಿಶ್ವವಿದ್ಯಾಲಯದಿಂದ ಇತಿಹಾಸ ಮತ್ತು ಕ್ರಿಮಿನಲ್ ಜಸ್ಟೀಸ್ನಲ್ಲಿ ಪದವಿ ಪಡೆದಿದ್ದಾರೆ. ಸಾರ್ವಜನಿಕ ವಕೀಲರಾಗಿ ವೃತ್ತಿ ಜೀವನ ಪ್ರಾರಂಬಿಸಿ, ನಂತರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ.
ಇವರೊಬ್ಬ ಪ್ರತಿಭಾವಂತ ವಕೀಲ, ತನಿಖಾಧಿಕಾರಿ ಹಾಗೂ ಅಮೆರಿಕಾದ ಹೋರಾಟಗಾರ. ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ (ಎನ್ಎಸ್ಸಿ) ಭಯೋತ್ರಪಾದನಾ ನಿಗ್ರಹದ ಹಿರಿಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಬಯಲಿಗೆಳೆಯಲು ಹಲವು ಹೋರಾಟಗಳನ್ನು ಕೈಗೊಂಡಿದ್ದು, ಭಯೋತ್ರಾದಕರ ಹತ್ಯೆ ಹಾಗೂ ಅಮೆರಿಕಾದ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.