ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರದಾಡುತ್ತಿದ್ದಾರೆ ನಟ ದರ್ಶನ್. ಜಾಮೀನು ಅರ್ಜಿ ಸಲ್ಲಿಸಿ ಕೋರ್ಟ್ನಲ್ಲಿ ದರ್ಶನ್ ಪರ ಕಾನೂನು ಹೋರಾಟ ನಡೆಯುವಾಗಲೇ, ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ತೂಗುದೀಪ್ ರಿಲೀಸ್ ಆಗಿದ್ದಾರೆಯೇ ?
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ತೂಗುದೀಪ್ ಜಾಮೀನು ಅರ್ಜಿ ವಿಚಾರಣೆ ಹಲವು ದಿನಗಳಿಂದಲು ನಡೆಯುತ್ತಿದ್ದು, ದರ್ಶನ್ ತೂಗುದೀಪ್ ಜಾಮೀನು ಅರ್ಜಿ ಮಾನ್ಯವಾಗಿ ಬೇಲ್ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದರು.

ದರ್ಶನ್ ಅವರನ್ನ ರಿಲೀಸ್ ಮಾಡಬೇಕು ಎಂದು ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಇಷ್ಟೆಲ್ಲದರ ಮಧ್ಯೆ ಇಂದು ಹೈಕೋರ್ಟ್ನಲ್ಲಿ ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ. ಈ ಮೂಲಕ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ರಿಲೀಸ್ ಆಗುವುದು ಇನ್ನಷ್ಟು ತಡವಾಗಲಿದೆ.
ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ. ಅಕ್ಟೋಬರ್ 28ಕ್ಕೆ ವಿಚಾರಣೆಯು ನಡೆಯಲಿದೆ. ಈಗ ಆರೋಗ್ಯ ಸಮಸ್ಯೆಯಿಂದ ನಟ ದರ್ಶನ್ ಬಳಲುತ್ತಿದ್ದಾರೆ ಎಂದು ತಿಳಿಸಿದ ಹಿನ್ನೆಲೆ ವೈದ್ಯಕೀಯ ವರದಿ ಸಲ್ಲಿಸಲು ನಿರ್ದೇಶನ ನೀಡಿ, ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಅಕ್ಟೋಬರ್ 28ಕ್ಕೆ ಮುಂದೂಡಲಾಗಿದೆ. ಹೀಗಾಗಿ ಇಂದು ಕೂಡ ದರ್ಶನ್ ಅವರ ಅಭಿಮಾನಿಗಳಿಗೆ ಬೇಸರವಾಗಿದೆ.
120 ದಿನಗಳ ಕಾಲ ಜೈಲು ವಾಸವನ್ನ ಅನುಭವಿಸಿರುವ ನಟ್ ದರ್ಶನ್ ತೀವ್ರ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ವೈದ್ಯರು ಆಸ್ಪತ್ರೆಗೆ ದಾಖಲಾಗಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ಹೀಗಾಗಿ ಅನಾರೋಗ್ಯದ ಹಿನ್ನಲೆ ನಟ ದರ್ಶನ್ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.