
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಅಸ್ವಸ್ಥರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಉಸಿರಾಟದ ತೊಂದರೆಯ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೆನ್ನಮ್ಮ ಅವರು ಅನಾರೋಗ್ಯಕ್ಕೀಡಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ವಿಚಾರಿಸಲು ಕುಟುಂಬ ಸದಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಕೂಡ ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ವಿಚಾರವಾಗಿ ಏರ್ಪಡಿಸಲಾಗಿದ್ದ ಸಭೆ ರದ್ದುಪಡಿಸಿ ತಾಯಿಯ ಆರೋಗ್ಯ ಗಮನಿಸಲು ಬಂದಿದ್ದಾರೆ.

ಒಂದು ಕಡೆ ಚನ್ನಪಟ್ಟಣ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕೆಂಬ ಗೊಂದಲದಲ್ಲಿ ಹೆಚ್ಡಿ ಕುಮಾರಸ್ವಾಮಿ ಇದ್ದರೆ, ಇನ್ನೊಂದು ಕಡೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲೆ ಚಿಕಿತ್ಸೆ ನೀಡಲಾಗುತ್ತಿದೆ.