ಕಾಂತಾರ ಸಿನಿಮಾವನ್ನು ಮಂಗಳೂರಿನಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತವಾಗಿ ಬಂದು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಂತಾರಾ ಚಿತ್ರ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ನಟ ಚೇತನ್ ಅವರ ಭೂತಕೋಲದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೈವಾರಾಧನೆ ಹಿಂದೂ ಧರ್ಮದ ಭಾಗ ಹೌದಾ ಅಲ್ವಾ ಎನ್ನುವುದು ಗೊತ್ತಿಲ್ಲ. ಆದರೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲ ಸ್ವಭಾವವನ್ನು ಅರಿಯದೇ ಮಾತನಾಡಿದರೆ ಬೇರೆಯಾಗುತ್ತದೆ. ಧರ್ಮದ ಮೂಲ ಹುಡುಕುತ್ತಾ ಹೋದರೆ ಎಲ್ಲಿಯೂ ಸಿಗುವುದಿಲ್ಲ.
ನಂಬಿಕೆ ಆಚರಣೆ ನಡವಳಿಕೆ ಸ್ವಾಭಾವಿಕವಾಗಿ ಬೆಳೆದು ಬಂದಿದೆ. ಇದನ್ನು ನಾವು ಬಿಟ್ಟಿರೋಕೆ ಸಾಧ್ಯವೇ ಇಲ್ಲ. ಅವರು ಹಿಂದೂ ಧರ್ಮದ ಯಾವ ಸೂಕ್ಷ್ಮತೆಯನ್ನು ಹೋಗಿ ನೋಡಿದ್ದಾರೆ ಅನ್ನೋದು ಗೊತ್ತಿಲ್ಲ. ದೈವಾರಾಧನೆಗೆ ಎರಡು ಜಿಲ್ಲೆಯಲ್ಲಿ ವ್ಯಾಪಕವಾದ ನಂಬಿಕೆಯಿದೆ. ಇವತ್ತು ದೈವಾರಾಧನೆ ಮಾಡುತ್ತೇವೆ, ದೈವದ ನುಡಿಗೆ ಗೌರವ ಕೊಡುತ್ತೇವೆ, ದೈವ ಮೈಮೇಲೆ ಬಂದಾಗ ಮಾತಿಗೆ ಗೌರವ ಕೊಡುತ್ತೇವೆ. ಇದನ್ನು ಧರ್ಮಕ್ಕೆ, ಸೂಕ್ಷ್ಮಕ್ಕೆ ವಿಮರ್ಶೆ ಮಾಡುವ ಅಗತ್ಯವೇ ಇಲ್ಲ ಎಂದು ಹೇಳಿದರು.