ಸದ್ಯ ಜಾಮೀನಿನ ಮೇಲೆ ಹೊರಗಿದ್ದ ಜನಾರ್ಧನರೆಡ್ಡಿ ಚುನಾವಣೆಗೆ ನಿಂತು ಗೆದ್ದ ಬಳಿಕ ಎಲ್ಲವೂ ಒಂದು ತಹಬದಿಗೆ ಬರ್ತಾ ಇದೆ ಅಂತ ಅಂದುಕೊಳ್ತಾ ಇರುವಾಗಲೇ ಈಗ ಮತ್ತೆ ಸಂಕಷ್ಟ ಜನಾರ್ಧನ ರೆಡ್ಡಿಗೆ ಎದುರಾಗಿದೆ. ಓಬಳಾಪುರಂ ಅಕ್ರಮ ಗಣಿಗಾರಿಕೆ ಮತ್ತು ಗಡಿ ಒತ್ತುವರಿ ಪ್ರಕರಣದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಜನಾರ್ಧನ ರೆಡ್ಡಿಗೆ ಈಗ ಮತ್ತೆ ಜೈಲು ಶಿಕ್ಷೆಯಾಗಿದೆ. ಅವರನ್ನ ದೋಷಿ ಎಂದು ನ್ಯಾಯಾಲಯ ಘೋಷಿಸಿದೆ. ಅಷ್ಟೆ ಅಲ್ಲ 7 ವರ್ಷಗಳ ಜೈಲು ಶಿಕ್ಷೆಯನ್ನೂ ಪ್ರಕಟಿಸಿದೆ.

ಹೌದು, ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಆಂಧ್ರ-ಕರ್ನಾಟಕ ಗಡಿ ಒತ್ತುವರಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಪೂರ್ಣಗೊಳಿಸಿರುವ ಆಂಧ್ರದ ಸಿಬಿಐ ವಿಶೇಷ ಕೋರ್ಟ್ ಆದೇಶ ನೀಡಿದೆ. ಅದಿರು ಬಗೆಯಲು ಆಂಧ್ರ ಪ್ರದೇಶದ ಪರ್ಮಿಟ್ ಪಡೆದು ರಾಜ್ಯದ ಗಡಿರೇಖೆಯನ್ನು ದ್ವಂಸ ಮಾಡಿ ಅಕ್ರಮ ಅದಿರು ತೆಗೆಯಲಾಗಿದೆ ಎಂಬ ಆರೋಪವೂ ಇತ್ತು. ಈಗ ತಿರ್ಪು ಪ್ರಕಟ ಆಗಿದೆ.
ಪ್ರಕರಣದಲ್ಲಿ A1 ಓಎಂಸಿ ಎಂಡಿ ಶ್ರೀನಿವಾಸ ರೆಡ್ಡಿ, A2 ಜನಾರ್ದನ ರೆಡ್ಡಿ, A3 ರಾಜಗೋಪಾಲ್ ರೆಡ್ಡಿ, A4 ಅಲಿಖಾನ್ ಅಪರಾಧಿಗಳಾಗಿದ್ದಾರೆ. ಇವರ ವಿರುದ್ಧ ಗಡಿ ಗುರುತು ನಾಶ ಮತ್ತು ಅರಣ್ಯ ಕಾಯಿದೆ ಉಲ್ಲಂಘನೆಯ ಆರೋಪದ ಮೇಲೆ ಸೆಕ್ಷನ್ 120 ಮತ್ತು 120ಬಿ, 379, 411, 420, 422 ಮತ್ತು 447ರ ಅಡಿಯಲ್ಲಿ ಕೇಸ್ ದಾಖಲಾಗಿದೆ. ಪ್ರಕರಣದಲ್ಲಿ 3400 ಕ್ಕೂ ಹೆಚ್ಚು ದಾಖಲೆಗಳ ಪರಿಶೀಲನೆ ನಡೆಸಲಾಗಿದ್ದು, 219ಕ್ಕೂ ಹೆಚ್ವು ಸಾಕ್ಷಿಗಳನ್ನು ವಿಚಾರಣೆ ಮಾಡಲಾಗಿದೆ.

ಶಾಸಕ ಜನಾರ್ದನ ರೆಡ್ಡಿ ಅವರ ಒಎಂಸಿ ಕಂಪನಿ ಓಬಳಾಪುರಂ ಮತ್ತು ಡಿ. ಹಿರೇಹಾಳದಲ್ಲಿ ಕ್ರಮವಾಗಿ 68.5 ಹೆಕ್ಟೇರ್ ಮತ್ತು 39.5 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ಗುತ್ತಿಗೆ ವಿಚಾರದಲ್ಲಿ ಅಕ್ರಮ ಮಾಡಿದ್ದಾರೆ ಹಾಗೆ ವಿವೇಚನರಹಿತವಾಗಿ ಕಬ್ಬಿಣದ ಅದಿರು ತೆಗಯಲಾಗಿದೆ ಅಂತ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸಿಬಿಐ 2009 ರಲ್ಲಿ ಒಎಂಸಿ ಕಂಪನಿಯ ಅಕ್ರಮ ಗಣಿಗಾರಿಕೆ ವಿಚಾರವಾಗಿಯೂ ತನಿಖೆ ಮಾಡಿದ್ದಲ್ಲದೆ, ಆರೋಪವನ್ನ ಸಬೀತು ಮಾಡಿತ್ತು. ಆಗ ಅಕ್ರಮ ಗಣಿಗಾರಿಕೆ, ಅಕ್ರಮ ಆಸ್ತಿ ಗಳಿಕೆ ಅಂತ ಸೆಪ್ಟೆಂಬರ್ 5, 2011ರಲ್ಲಿ ಜನಾರ್ದನ ರೆಡ್ಡಿ ಸೇರಿ ಅನೇಕರಿಗೆ ಜೈಲಾಗಿತ್ತು. ಇವರು ಆಂಧ್ರಪ್ರದೇಶದ ಪೆನುಗೊಂಡ ಜೈಲು ಪಾಲಾಗಿದ್ದರು. ಬಳಿಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರೆಡ್ಡಿ ಮತ್ತು ಇತರರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.



