ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.20ರಂದು ಬೆಳಗಿನಿಂದ ಮಧ್ಯಾಹ್ನ 2 ಗಂಟೆಯವರೆಗೆ ದೇವರ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಇರುವುದಿಲ್ಲ.
ಚಂಪಾಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಅಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ನಡೆಯಲಿದೆ.
ಆ ದಿನ ಭಕ್ತರಿಗೆ ಮಧ್ಯಾಹ್ನ 2 ಗಂಟೆಯವರೆಗೆ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ. 2 ಗಂಟೆ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಪ್ರಸಿದ್ಧ ನಾಗಕ್ಷೇತ್ರ ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಚಂಪಾಷಷ್ಟಿ ಮಹೋತ್ಸವಕ್ಕೆ ಕರ್ನಾಟಕ ಮುಖ್ಯಮಂತ್ರಿ ಮಾನ್ಯ ಬಸವರಾಜ ಬೊಮ್ಮಾಯಿ ಅವರನ್ನು ಹಾಗೂ ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಆಮಂತ್ರಣ ನೀಡಿ ಆಹ್ವಾನಿಸಲಾಗಿದೆ.