ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸದ್ಯ ಸಿನಿಮಾ ಹಾಗೂ ರಾಜಕೀಯದಿಂದ ತುಸು ಅಂತರ ಕಾಯ್ದುಕೊಂಡು ಪ್ಯಾಮಿಲಿ ಜೊತೆಗೆ ವೆಕೇಶನ್ ಮೂಡ್ ನಲ್ಲಿದ್ದಾರೆ. ತಮ್ಮ ಪತ್ನಿ ಹಾಗೂ ಮಗನೊಂದಿಗೆ ನಿಖಿಲ್ ವಿದೇಶದಲ್ಲಿ ಎಂಜಾಯ್ ಮಾಡುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ನಿಖಿಲ್ ಕುಮಾರಸ್ವಾಮಿ ತಮ್ಮ ಪತ್ನಿ ಹಾಗೂ ಮಗನೊಂದಿಗೆ ಐಲ್ಯಾಂಡ್ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಜುಲೈ 21 ರಂದು ತಮ್ಮ ಪತ್ನಿಯ ಹುಟ್ಟುಹಬ್ಬದ ಸಲುವಾಗಿ ಫೋಟೋ ಒಂದನ್ನ ಹಂಚಿಕೊಂಡು ಶುಭಾಶಯ ತಿಳಿಸಿದ್ದರು. ಇದೀಗ ನಿನ್ನೆಯಷ್ಟೇ ವಿದೇಶದ ರಸ್ತೆಯಲ್ಲಿ ಪತ್ನಿಯ ಕೈ ಹಿಡಿದು ವಾಕಿಂಗ್ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದರು. ಈ ವಿಡಿಯೋ ಕಂಡಿರುವ ನಿಖಿಲ್ ಅಭಿಮಾನಿಗಳು ಹಾಗೂ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಹಾಗೂ ಅವರ ಇಡೀ ಕುಟುಂಬ ಸದ್ಯ ವಿದೇಶ ಪ್ರವಾಸದಲ್ಲಿದೆ. ಈ ನಡುವೆ ‘ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರ ಬೀಳಿಸಲು ಸಿಂಗಾಪುರಕ್ಕೆ ತೆರಳಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆ ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಆದರೆ ಇದೀಗ ಕುಮಾರಸ್ವಾಮಿ ಕುಟುಂಬ ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಕುಮಾರಸ್ವಾಮಿ ಹಾಗೂ ಫ್ಯಾಮಿಲಿ ಯೂರೋಪ್ ಪ್ರವಾಸದಲ್ಲಿದ್ದಾರೆ ಎನ್ನುವುದು ಸಾಬೀತಾಗಿದೆ.