ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವೈಯಕ್ತಿಕ ಟೀಕೆ ಹಾಗೂ ಅವಾಚ್ಯ ಪದಗಳನ್ನು ಬಳಸಿದ ಸಿಂಹ, ತಮ್ಮ ತಾಯಿಯ ಬಗ್ಗೆ ಅವಹೇಳನ ಮಾಡಿದ್ದಕ್ಕೆ ಈ ರೀತಿ ಉತ್ತರಿಸಬೇಕಾಯಿತು ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ವಾಗ್ದಾಳಿ ತಾರಕಕ್ಕೇರಿದೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರತಾಪ್ ಸಿಂಹ ಅವರು, ಪ್ರದೀಪ್ ಈಶ್ವರ್ ವಿರುದ್ಧ ಅತ್ಯಂತ ಕಟು ಮತ್ತು ಅವಾಚ್ಯ ಪದಗಳನ್ನು ಬಳಸಿ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.

ಎಚ್ಚರಿಕೆ ಇರಲಿ ,ನನ್ನ ತಾಯಿ ಬಗ್ಗೆ ಪ್ರದೀಪ್ ಈಶ್ವರ್ ಅವಹೇಳನವಾಗಿ ಮಾತಾಡಿದ್ದಾನೆ. ರಾಜಕೀಯವಾಗಿ, ಚಿಕ್ಕಬಳ್ಳಾಪುರದ ಗೌಡರ ಸಣ್ಣ ಮುನಿಸಿನ ಕಾರಣದಿಂದಾಗಿ ಪ್ರದೀಪ್ ಈಶ್ವರ್ ಗೆದ್ದ ಅಷ್ಟೇ ಎಂದು ಗೆಲುವಿನ ಬಗ್ಗೆಯೂ ಟೀಕಿಸಿದ್ದಾರೆ.
ಪ್ರದೀಪ್ ಈಶ್ವರ್ಗೆ ಅವನ ಭಾಷೆಯಲ್ಲಿಯೇ ಉತ್ತರ ಹೇಳುತ್ತಿರುವುದಕ್ಕೆ ಕರ್ನಾಟಕದ ಜನರ ಕ್ಷಮೆ ಕೇಳುತ್ತೇನೆ ಎಂದ ಪ್ರತಾಪ್ ಸಿಂಹ, ನನ್ನ ಬಗ್ಗೆ, ಮಾತಾಡಿದ್ರೆ ಎಚ್ಚರ. ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಅಂದ್ರೆ. ಪ್ರದೀಪ್ ಈಶ್ವರ್. ನಮ್ಮ ತಂದೆ ವಯಸ್ಸಿನಲ್ಲಿ ಇದ್ದಾಗ ಚಿಕ್ಕಬಳ್ಳಾಪುರ ಕಡೆ ಬಂದಿದ್ರೆ ನೀನು ಸುಂದರವಾಗಿ ಹುಟ್ಟುತ್ತಿದ್ದೆ. ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಬೇಕು ಮಗನೆ ಎಂದು ಏಕವಚನದಲ್ಲೇ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ.



