ರಾಷ್ಟ್ರೀಯ ಕಾಂಗ್ರೇಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇತ್ತೀಚಿನ ದಿನಗಳಲ್ಲಿ ನಾನಾ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ರಾಹುಲ್ ಕೆಂಪು ಶರ್ಟ್, ತಲೆ ಮೇಲೆ ಲಗೇಜ್ ಹೊತ್ತು ರೈಲ್ವೆ ನಿಲ್ದಾಣದಲ್ಲಿ ಕೂಲಿಯಾಗಿ ರೋಡಿಗಿಳಿದಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿತ್ತಿದೆ. ಅಷ್ಟಕ್ಕೂ ಕಾಂಗ್ರೇಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಕೂಲಿಯಾಗಿ ರೋಡಿಗೆ ಇಳಿದಿರುವುದು ಯಾಕೆ? ಎಂಬ ಪ್ರಶ್ನೆ ನಿಮ್ಮಲ್ಲಿದ್ರೆ ಈ ವರದಿ ಓದಿ.
ದೆಹಲಿಯ ಆನಂದ್ ವಿಹಾರ್ ರೈಲ್ವೆ ನಿಲ್ದಾಣದ ಬಳಿ ರೈಲ್ವೆಯ ಕೂಲಿಗಳು ತಮ್ಮ ಸಮಸ್ಯೆಗಳ ಕುರಿತು ಪ್ರತಿಭಟನೆ ಮಾಡುತ್ತಿದ್ದಾರೆ. ಇದರಲ್ಲಿ ರಾಹುಲ್ ಗಾಂಧಿಯವರು ಭಾಗಿಯಾಗಿ ನಮಗೆ ಬೆಂಬಲ ಸೂಚಿಸಬೇಕು ಎಂದು ಇತ್ತೀಚೆಗೆ ಹೇಳಿದ್ದ ಕೂಲಿಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರು ಹೋರಾಟದಲ್ಲಿ ಭಾಗಿಯಾಗಿ ಬ್ಯಾಗ್ ಅನ್ನು ತಮ್ಮ ತಲೆ ಮೇಲೆ ಹೊತ್ತುಕೊಂಡು ಕೂಲಿಗಳ ಸಮಸ್ಯೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಕೂಲಿ ವೇಷದಲ್ಲಿ ಹೋರಾಟದಲ್ಲಿ ಭಾಗಿಯಾದ ರಾಹುಲ್ ಗಾಂಧಿ ಅವರು ಕೂಲಿ, ಹಮಾಲರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ ತಿಳಿದುಕೊಂಡಿದ್ದಾರೆ. ತಮ್ಮ ಹೋರಾಟದ ಧ್ವನಿ ಕೇಳಿ ಕಾಂಗ್ರೆಸ್ ನಾಯಕ ಭಾಗಿಯಾಗಿದ್ದಕ್ಕೆ ಕೂಲಿಗಾರರು ಎಲ್ಲರೂ ಖುಷಿ ವ್ಯಕ್ತಪಡಿಸಿದ್ದಾರೆ. ಸದ್ಯ ರಾಹುಲ್ ಗಾಂಧಿ ಬ್ಯಾಗ್ ಹೊತ್ತುಕೊಂಡು ಹೋರಾಟದಲ್ಲಿ ಭಾಗಿಯಾಗಿರುವ ವಿಡಿಯೋ ಸಾಮಾಜಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗುತ್ತಿದೆ.



