ರೆಬಲ್ ಸ್ಟಾರ್ ಅಂಬರೀಶ್ ಪುತ್ರ, ಸ್ಯಾಂಡಲ್ ವುಡ್ನ ಭರವಸೆಯ ನಟ ಅಭಿಷೇಕ್ ಅಂಬರೀಶ್ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ರೆಬಲ್ ಸ್ಟಾರ್ ಮತ್ತು ಸಮಲತಾ ದಂಪತಿಯ ಏಕೈಕ ಪುತ್ರ ಅಭಿಷೇಕ್ ಮದುವೆಗೆ ಸಜ್ಜಾಗಿದ್ದಾರೆ ಎನ್ನುವ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸದ್ಯ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಈಗಾಗಲೇ ನಿಶ್ಚಿತಾರ್ಥ ದಿನಾಂಕ ಕೂಡ ಫಿಕ್ಸ್ ಆಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಂಬರೀಶ್ ಕುಟುಂಬದ ಕಡೆಯಿಂದ ಯಾವುದೇ ಮಾಹಿತಿ ರಿವೀಲ್ ಆಗಿಲ್ಲ. ಅಭಿಷೇಕ್ ಮದುವೆ ವಿಚಾರವನ್ನು ಅತ್ಯಂತ ಗೌಪ್ಯವಾಗಿ ಇಡಲಾಗಿದ್ದು ರಹಸ್ಯವಾಗಿಯೇ ಎಲ್ಲಾ ತಯಾರಿ ಮಾಡಲಾಗುತ್ತಿದೆ ಎನ್ನಲಾಗಿದೆ.

ಅಂಬಿ ಮನೆಯ ಸೊಸೆ ಯಾರೆಂದು ನೋಡಲು, ತಿಳಿದುಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ. ಮೂಲಗಳ ಪ್ರಕಾರ ಅಂಬರೀಶ್ ಕೈ ಹಿಡಿಯುತ್ತಿರುವ ಹುಡುಗಿ ಖ್ಯಾತ ಮಾಡೆಲ್ ಎಂದು ಹೇಳಲಾಗುತ್ತಿದೆ. ಅಂದಹಾಗೆ ಅಭಿ ಮದುವೆ ಕಂಪ್ಲೀಟ್ ಅರೇಂಜ್ ಮ್ಯಾರೇಜ್ ಆಗಿದ್ದು ಅಮ್ಮ ನೋಡಿರುವ ಹುಡುಗಿಯನ್ನೇ ಮದುವೆಯಾಗಲು ಯಂಗ್ ರೆಬೆಲ್ ಸ್ಟಾರ್ ನಿರ್ಧಾರ ಮಾಡಿದ್ದಾರಂತೆ. ಆದರೆ ಯಾರು ಎಂದು ಎಲ್ಲಿಯೂ ಬಹಿರಂಗ ಪಡಿಸಿಲ್ಲ.
ಅಭಿಷೇಕ್ ನಿಶ್ಚಿತಾರ್ಥ ಸಮಾರಂಭ ಡಿಸೆಂಬರ್ ತಿಂಗಳಲ್ಲಿ ನಡೆಯಲಿದೆ ಎನ್ನಲಾಗಿದೆ. ಡಿಸೆಂಬರ್ 11ರಂದು ಅಭಿಷೇಕ್ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆಗಳು ಆಗಿದ್ದು ಈಗಾಗಲೇ ತಯಾರಿ ನಡೆಯುತ್ತಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ನಿಶ್ಚಿತಾರ್ಥಕೆ ಬೇಕಾಗಿರುವ ಎಲ್ಲ ತಯಾರಿಗಳನ್ನ ಖಾಸಗಿ ಇವೆಂಟ್ ಕಂಪನಿಗೆ ನೀಡಲಾಗಿದೆಯಂತೆ.