ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಕಾವೇರಿ ನೀರಿಗಾಗಿ ದಿನೇ ದಿನೆ ಕಾದಾಟ ಹೆಚ್ಚುತ್ತಿದೆ. ಈ ನಡುವೆ ಮೊನ್ನೆಯಷ್ಟೇ ಕಾವೇರಿ ನದಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ನಲ್ಲಿ ಭಾಗಿಯಾಗಿದ್ದ ನಟ ನೆನಪಿರಲಿ ಪ್ರೇಮ್ ಇದೀಗ ಪತ್ರ ಚಳವಳಿಯಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕರೆಕೊಟ್ಟಿದ್ದ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆಯಿರಿ ಚಳವಳಿಯಲ್ಲಿ ಭಾಗಿಯಾಗಿ, ತಮ್ಮ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಈ ಫೋಟೋಗಳು ಇದೀಗ ವೈರಲ್ ಆಗುತ್ತಿವೆ.

https://www.instagram.com/reel/Cx1__qar26k/?utm_source=ig_web_copy_link
ಕಾವೇರಿ ಪರ ಹೋರಾಟದಲ್ಲಿ ಸಾಕಷ್ಟು ಸೆಲೆಬ್ರೆಟಿಗಳು ಭಾಗಿಯಾಗಿದ್ದರು. ಇವರೊಂದಿಗೆ ಕನ್ನಡ ನೆಲ-ಜಲ ವಿಷಯದಲ್ಲಿ ಹೋರಾಡಲು ಪ್ರೇಮ್ ಯಾವತ್ತಿಗೂ ಮುಂದು. ಅನೇಕ ಹೋರಾಟಗಳಲ್ಲೂ ಅವರು ಭಾಗಿಯಾಗಿದ್ದಾರೆ. ಇದೀಗ ರಕ್ತದಲ್ಲಿ ಪತ್ರ ಬರೆದು, ಆ ಪತ್ರವನ್ನು ಪ್ರಧಾನಿ ಕಳುಹಿಸಿದ್ದಾರೆ. ಕಾವೇರಿ ವಿಷಯದಲ್ಲಿ ಮಧ್ಯಸ್ತಿಕೆ ವಹಿಸಿ, ನಮ್ಮ ನೆಲದ ರೈತರಿಗೆ ನ್ಯಾಯ ದೊರಕಿಸಿ ಎಂದು ಅವರು ಪತ್ರದ ಮೂಲಕ ವಿನಂತಿಸಿಕೊಂಡಿದ್ದಾರೆ.
ತಮ್ಮ ರಕ್ತದಲ್ಲಿ ಪತ್ರ ಬರೆಯುತ್ತಿರುವ ವಿಡಿಯೋ ಹಾಗೂ ಫೋಟೋಗಳನ್ನು ಪ್ರೇಮ ತಮ್ಮ ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದು, ಸಾಕಷ್ಟು ಜನರು ಪ್ರತಿಕ್ರಿಯೆ ನೀಡಿದ್ದಾರೆ. ನೆಗೆಟಿವ್ ಮತ್ತು ಪಾಸಿಟಿವ್ ಎರಡೂ ಕಾಮೆಂಟ್ಸ್ ಅಲ್ಲಿ ನೋಡಬಹುದಾಗಿದೆ. ಕೆಲವರು ಭಾವನಾತ್ಮಕವಾಗಿ ಸ್ಪಂದಿಸಿದರೆ, ಇನ್ನೂ ಕೆಲವರು ಕಾನೂನಿನ ಪಾಠವನ್ನೂ ಮಾಡಿದ್ದಾರೆ. ಸದ್ಯ, ನೆನಪಿರಲಿ ಪ್ರೇಮ್ ಬರೆದಿರುವ ರಕ್ತದ ಪತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.