ತೆಲುಗು ಕಿರುತೆರೆಯಲ್ಲಿ ಮಿಂಚುತ್ತಿರುವ ಕನ್ನಡತಿ ಜ್ಯೋತಿ ರೈ ಪ್ರಸ್ತುತ ವೈಯಕ್ತಿಕ ಕಾರಣದಿಂದ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ. ಮದುವೆಯಾಗಿ ಒಂದು ಮಗುವಿದ್ದರೂ ಇವರ ಸೌಂದರ್ಯ ದಿನೇ ದಿನೇ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಇವರು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಸಖತ್ ಬೋಲ್ಡ್ ಆಗಿರುವ ಫೋಟೋಗಳನ್ನೇ ಪೋಸ್ಟ್ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಪ್ರಿಟಿ ಗರ್ಲ್ ಎಂಬ ವೆಬ್ ಸಿರೀಸ್ನಲ್ಲಿ ಜ್ಯೋತಿ ರೈ ನಟಿಸುತ್ತಿದ್ದು, ಆ ಸೀರೀಸ್ಗೆ ಸಂಬಂಧಿಸಿದ ಪೋಟೋಗಳಿವು ಎಂದು ಸ್ವತಃ ಅವರೇ ಹೇಳಿಕೊಂಡಿದ್ದು, ಈ ಬೋಲ್ಡ್ ಫೋಟೋಗಳು ಸಕ್ಕತ್ ವೈರಲ್ ಆಗುತ್ತಿವೆ.

ಕನ್ನಡ ಸೀರಿಯಲ್ ಗಳ ಮೂಲಕ ನಟನೆ ಆರಂಭಿಸಿ ಇದೀಗ ತೆಲುಗು ಸೀರಿಯಲ್ಗಳಲ್ಲಿ ನಟಿಸುವ ಮೂಲಕ ಜ್ಯೋತಿ ರೈ ತೆಲುಗು ನಾಡಲ್ಲಿ ಮನೆ ಮಾತಾಗಿದ್ದು, ಅವರಿಗೆ ಸಾಕಷ್ಟು ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಇದರೊಂದಿಗೆ ಸೀರಿಯಲ್ ಮಾತ್ರವಲ್ಲದೇ ಸಿನಿಮಾ, ವೆಬ್ ಸೀರಿಸ್ ಗಳಲ್ಲೂ ನಟಿಸುತ್ತಿದ್ದಾರೆ. ಕನ್ನಡಿಗರಿಗೆ ಚಿರಪರಿಚಿತರಾಗಿರುವ ಜ್ಯೋತಿ ರೈ ಕನ್ನಡದ ಹೊಂಗನಸು ಧಾರವಾಹಿಯಲ್ಲೂ ನಟಿಸಿದ್ದರು. .
ಮದುವೆಯಾಗಿ 10 ವರ್ಷದ ಮಗನನ್ನು ಹೊಂದಿರುವ ಇವರು ಪತಿಯಿಂದ ವಿಚ್ಛೇದನ ಪಡೆದಿದ್ದು, ತಮ್ಮ ಹೆಸರಿನ ಹಿಂದೆ ತೆಲುಗು ಯುವ ನಿರ್ದೇಶಕ ಸುಕು ಪೂರ್ವಜ್ ಹೆಸರನ್ನು ಜೋಡಿಸಿಕೊಂಡಿದ್ದಾರೆ. ಹೀಗಾಗಿ ಇವರಿಬ್ಬರು ಮದುವೆಯಾಗಿದ್ದಾರೆ ಸುದ್ದಿಗಳು ಹರಿದಾಡುತ್ತಿದೆ. ಸದ್ಯ, ಜ್ಯೋತಿ ರೈ ಪೋಸ್ಟ್ ಮಾಡಿರುವ ಹಾಟ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ಸೌಂಡ್ ಮಾಡುತ್ತಿದ್ದು, ನಟಿಯ ಸೌಂದರ್ಯ ಕಂಡು ನೆಟ್ಟಿಗರು ಫಿದಾ ಆಗಿದ್ದಾರೆ. ರಶ್ಮಿಕಾ ಮಂದಣ್ಣ, ಶ್ರೀಲೀಲಾ ಬಳಿಕ ನಟಿ ಜ್ಯೋತಿ ರೈ ಟಾಲಿವುಡ್ ನಲ್ಲಿ ದೊಡ್ಡ ಹೆಸರು ಮಾಡುವ ಸಾಧ್ಯತೆಗಳಿದೆ.