ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿ ಹೆಸರು ಮಾಡಿದ್ದ ನಟಿ ಜ್ಯೋತಿ ರೈ ಇತ್ತೀಚೆಗೆ ತಮ್ಮ ಹಾಟ್ ಲುಕ್ ಹಾಗೂ ವೈಯಕ್ತಿಕ ಬದುಕಿನ ಸಂಬಂಧ ಸುದ್ದಿಯಾಗಿದ್ದರು. ಇದೀಗ ಜ್ಯೋತಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ತೆಲುಗು ನಿರ್ದೇಶಕರೊಂದಿಗೆ ಇರುವ ಫೋಟೋ ಜತೆಗೆ ‘ಗುಡ್ ನ್ಯೂಸ್ ಇದೆ’ ಎಂದು ಪೋಸ್ಟ್ ಮಾಡಿದ್ದು, ಈ ವಿಚಾರ ಇದೀಗ ಸಕ್ಕತ್ ಸದ್ದು ಮಾಡುತ್ತಿದೆ. ಈ ವಿಚಾರದ ಡೀಟಿಯಲ್ಸ್ ಇಲ್ಲಿದೆ ನೋಡಿ.

ಕನ್ನಡ ಸೇರಿದಂತೆ ಇತರೆ ಭಾಷೆಯ ಹಲವು ಹಿಟ್ ಸೀರಿಯಲ್ಗಳಲ್ಲಿ ನಟಿಸಿರುವ ಜ್ಯೋತಿ ರೈ ತಮ್ಮ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದಾರೆ ಎನ್ನಲಾಗಿದೆ. ಇವರಿಗೆ ಓರ್ವ ಪುತ್ರನಿದ್ದಾನೆ. ಸದ್ಯ ತಮಿಳು, ತೆಲುಗು ಭಾಷೆಯ ಸಿನಿಮಾ, ವೆಬ್ ಸೀರಿಸ್ಗಳಲ್ಲಿ ಬ್ಯುಸಿಯಾಗಿರುವ ಈ ನಟಿ, ಪರಭಾಷಾ ನಿರ್ದೇಶಕ ಸುಕುಮಾರ್ ಜೊತೆಗಿನ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜ್ಯೋತಿ- ಸುಕುಮಾರ್ ಡೇಟಿಂಗ್ ನಡೆಸುತ್ತಿರುವುದು ನಿಜ ಎಂದು ಟಾಲಿವುಡ್ನಲ್ಲಿ ಸುದ್ದಿಯಾಗಿದೆ. ಇವರಿಬ್ಬರೂ ರಹಸ್ಯವಾಗಿ ಮದುವೆಯಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಆದರೆ, ಈಗ ಜ್ಯೋತಿ ಹಾಗೂ ಸುಕು ಇಬ್ಬರೂ ಕೂಡ ತಮ್ಮ ಇನ್ ಸ್ಟಾಗ್ರಾಂ ಪೇಜ್ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಸರ್ಪ್ರೈಸ್ ಕೊಡಲು ಮುಂದಾಗಿದ್ದಾರೆ. ಆದಷ್ಟು ಬೇಗ ಸಿಹಿ ಸುದ್ದಿ ಹಂಚಿಕೊಳ್ಳಲು ಬಾಕಿ ಇದೆ ಎಂದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಸಾಕಷ್ಟು ಕುತೂಹಲ ಕರೆಳಿಸಿದ್ದು, ಅಭಿಮಾನಿಗಳು ಇದಕ್ಕಾಗಿ ಕಾಯುತ್ತಿದ್ದಾರೆ.