ಶಿವಣ್ಣ ಅವರು ಸರ್ಜರಿಗಾಗಿ ಅಮೆರಿಕಾಗೆ ತೆರಳಿರುವ ವಿಷಯ ಗೊತ್ತೇ ಇದೆ. ಶಿವಣ್ಣ ಅವರ ಆರೋಗ್ಯದಲ್ಲಿ ಏರು ಪೇರಾಗಿ, ಕ್ಯಾನ್ಸರ್ ಗೆ ಸರ್ಜರಿ ಮಾಡಿಸಲೇಬೇಕಾದ ಹಂತಕ್ಕೆ ತಲುಪಿದ ನಂತರ ಅವರು ಭಾರತದಲ್ಲಿ ಒಂದಷ್ಟು ಕಾಲ ಚಿಕಿತ್ಸೆ ಪಡೆದು, ಸರ್ಜರಿಗಾಗಿ ಅಮೆರಿಕಾಗೆ ಹೋದರು. ಡಿಸೆಂಬರ್ 18ರಂದು ಅಮೆರಿಕಾಗೆ ಹೊರಟರು ಶಿವಣ್ಣ, ಅಮೆರಿಕಾದ ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಶಿವಣ್ಣ ಅವರಿಗೆ ಸರ್ಜರಿ ನಡೆದಿದೆ. ಡಿಸೆಂಬರ್ 24ರಂದು ಶಿವಣ್ಣ ಅವರಿಗೆ ಸರ್ಜರಿ ನಡೆದಿದ್ದು, ಯಶಸ್ವಿಯಾಗಿ ಮುಗಿದಿದೆ, ಪ್ರಸ್ತುತ ಶಿವಣ್ಣ ಚೇತರಿಸಿಕೊಳ್ಳುತ್ತಿದ್ದಾರೆ. ನಿನ್ನೆಯಷ್ಟೇ ಶಿವಣ್ಣ ಅವರ ಆರೋಗ್ಯದ ಬಗ್ಗೆ ಪತ್ನಿ ಗೀತಕ್ಕ ಮಾಹಿತಿ ನೀಡಿದರು.
ಗೀತಕ್ಕ ಅವರು, ಅವರ ತಮ್ಮ ಮಧು ಬಂಗಾರಪ್ಪ, ಹಾಗೂ ಡಾಕ್ಟರ್ ಈ ಮೂವರು ಸಹ ಶಿವಣ್ಣ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿ, ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದು ಹೇಳಿದರು. ಸರ್ಜರಿ ಸಕ್ಸಸ್ ಫುಲ್ ಆಗಿ ಮುಗಿದಿದೆ ಎಂದು ಹೇಳಿದರು. ಇದರಿಂದ ಅಭಿಮಾನಿಗಳಿಗೂ ನೆಮ್ಮದಿಯಾಗಿತ್ತು. ಇದರ ಜೊತೆಗೆ ಶಿವಣ್ಣ ಅವರ ಮಗಳು ನಿವೇದಿತಾ ಶಿವ ರಾಜ್ ಕುಮಾರ್ ಅವರು ಸಹ ಅಭಿಮಾನಿಗಳಿಗೆ ವಿಶೇಷವಾಗಿ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ. ಹಾಗೆಯೇ ವೈದ್ಯರಿಗೆ ಕುಟುಂಬದವರಿಗೆ ಧನ್ಯವಾದ ತಿಳಿಸಿದ್ದಾರೆ. ಇನ್ನು ಕೆಲವು ವಿಚಾರವನ್ನು ತಿಳಿಸಿದ್ದಾರೆ. ನಿವೇದಿತಾ ಅವರು ಪತ್ರದಲ್ಲಿ ಬರೆದಿರುವುದು ಏನು ಎಂದು ತಿಳಿಸುತ್ತೇವೆ..
ಉತ್ತಮ ಸಂಬಂಧಗಳನ್ನು ಕಾಯ್ದುಕೊಳ್ಳಲು, ವಯಸ್ಸಾದ ಕಾಲದಲ್ಲಿ ನೆಮ್ಮದಿಯಾಗಿ ಬದುಕಲು ಕೌಟುಂಬಿಕ ವಿವಾದಗಳನ್ನು ನಿರ್ವಹಿಸಿದ ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ ಹಿರಿಯ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಶೀಲರವರು ಕೊಟ್ಟಿದ್ದಾರೆನ್ನುವ ಸಲಹೆಗಳು ಇಲ್ಲಿವೆ.
ಸಂಗಾತಿಯ ಚುಚ್ಚು ಮಾತುಗಳಿಂದ ನರಳಬೇಡಿ..!
“ದೇವರ ಕೃಪೆಯಿಂದ ನನ್ನ ತಂದೆಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ, ಮಿಯಾಮಿ ಹೆಲ್ತ್ ಕೇರ್ ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ. ಮುರುಗೇಸನ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ತೂರ್ವಕ ಧನ್ಯಾದಗಳನ್ನು ಅರ್ಪಿಸುತ್ತೇವೆ. ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಸ್ಥೆರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ..
ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ.
ಇದರ ನಡುವೆ, ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ, ಸ್ನೇಹಿತರಿಗೂ ಮತ್ತು ಮಾಧ್ಯಮದ ಸದಸ್ಯರಿಗೂ ನಾವು ನಮ್ಮ ತುಂಬು ಹೃದಯದ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇವೆ. ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿವೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದೆಂದಿಗೂ ಆಭಾರಿಯಾಗಿರುತ್ತೇವೆ. ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು, ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನು ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇವೆ.
ಧನ್ಯವಾದಗಳು, ನಿವೇದಿತಾ ಶಿವರಾಜಕುಮಾರ್..” ಎಂದು ನಿವೇದಿತಾ ಶಿವ ರಾಜ್ ಕುಮಾರ್ ಅವರು ಪತ್ರದಲ್ಲಿ ತಿಳಿಸಿದ್ದು, ಅಭಿಮಾನಿಗಳಿಗೆ ಈ ಪತ್ರ ನೋಡಿ ಇನ್ನಷ್ಟು ಸಮಾಧಾನ ಸಿಕ್ಕಿದೆ. ಎಲ್ಲರೂ ಸಹ ಶಿವಣ್ಣ ಅವರನ್ನು ನೋಡೋದಕ್ಕೆ ಕಾಯುತ್ತಿದ್ದಾರೆ. ಶಿವಣ್ಣ ಈಗ ಚೇತರಿಸಿಕೊಳ್ಳುತ್ತಿದ್ದು, ಶಿವಣ್ಣ ಅವರು ಸಹ ಮಾತನಾಡಿ, ಸಂತೋಷದಲ್ಲಿ ನಮ್ಮೆಲ್ಲರ ಜೊತೆಗೆ ಪಾಲ್ಗೊಳ್ಳಬೇಕು ಎನ್ನುವುದು ಅಭಿಮಾನಿಗಳ ಆಸೆ. ಆದಷ್ಟು ಬೇಗ ಆ ದಿನ ಬರಲಿ, ಶಿವಣ್ಣ ಇನ್ನೊಂದು ತಿಂಗಳಲ್ಲಿ ಬೇಗ ಕರ್ನಾಟಕಕ್ಕೆ ವಾಪಸ್ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ..