ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವಂತ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಅನೇಕ ಭಕ್ತರು ಭೇಟಿ ನೀಡುತ್ತಾರೆ.ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವಂತ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕಿನ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಿಂದ ಈ ನಿಯಮ ಹೊರತರಲಾಗಿದ್ದು ಭಕ್ತಾದಿಗಳು ಇದನ್ನು ತಿಳಿದು ಅನುಸರಿಸಲೇಬೇಕಾಗಿದೆ.
ದೇವಸ್ಥಾನದ ಪಕ್ಕದಲ್ಲೇ ರಥ ಬೀದಿಯಿಂದ, ಅರೆಬರೆ ಉಡುಪು ಧರಿಸಿ ಸಾರ್ವಜನಿಕರು ಸಂಚರಿಸೋದಕ್ಕೆ ನಿಷೇಧ ವಿಧಿಸಲಾಗಿದೆ. ಮಹಾಬಲೇಶ್ವರ ದೇವಸ್ಥಾನದ ಪಶ್ಚಿಮ ದ್ವಾರದವರೆಗಿನ ರಸ್ತೆಯಲ್ಲಿ ಅರೆ ಬರೆ ಉಡುಪು ಧರಿಸಿ ಸುತ್ತಾಡುವವರೇ ಹೆಚ್ಚಾಗಿತ್ತು. ಈ ಹಿನ್ನಲೆಯಲ್ಲಿ ದೇವಸ್ಥಾನದ ಮೇಲುಸ್ತುವಾರಿ ಸಮಿತಿಯು ಇಂತಹ ನಿರ್ಧಾರವನ್ನು ಕೈಗೊಂಡಿದೆ.
ಮಹಾಬಲೇಶ್ವರ ದೇವಸ್ಥಾನದ ಮೇಲುಸ್ತುವಾರಿ ಕಮಿಟಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಕಮಿಟಿಯಿಂದ ದೇವಸ್ಥಾನದ ಬಳಿಯಲ್ಲಿಯೇ ಸಾರ್ವಭೌಮ ಶ್ರೀ ಮಹಾಬಲೇಶ್ವರ ದೇವಸ್ಥಾನದ ರಥದ ನಿಲುಗಡೆ ಸ್ಥಳದಿಂದ ಮಹಾಬಲೇಶ್ವರ ದೇವಸ್ಥಾನದ ಪಶ್ಚಿಮ ದ್ವಾರದವರೆಗಿನ ಪ್ರದೇಶದಲ್ಲಿ ಅರೆ-ಬರೆ ಉಡುಪುಗಳನ್ನು ಧರಿಸಿ, ಸಂಚರಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.