ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಮುದಾಯದ ಪರವಾಗಿ ನಿಂತು ನಿರ್ಣಾಯಕ ಪಾತ್ರ ವಹಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ವಾಲ್ಮೀಕಿ ಗುರುಪೀಠದ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಸತ್ಕರಿಸಿದರು.
ಇಂದು ಪಕ್ಷದ ಕಚೇರಿಗೆ ಆಗಮಿಸಿದ ಶ್ರೀಗಳು, ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ತಾವು ನಡೆಸಿದ ಹೋರಾಟಕ್ಕೆ ಬೆಂಬಲ ನೀಡಿದ್ದು ಮಾತ್ರವಲ್ಲದೆ, ಮುಖ್ಯಮಂತ್ರಿ ಆಗಿದ್ದಾಗ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚನೆ ಮಾಡಿ ಮೀಸಲು ಹೆಚ್ಚಳಕ್ಕೆ ಮೂಲ ಕಾರಣರಾಗಿದ್ದಾರೆ ಎಂದು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳ ಅಭಿನಂದನಾ ಪತ್ರವನ್ನು ಓದಿ ಗೌರವಿಸಲಾಯಿತು.