ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಎಲ್ಲೆಡೆಯೂ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ.
ಈ ಸಿನಿಮಾದಲ್ಲಿ ಭೂತಕೋಲ, ಕರಾವಳಿ ಭಾಗದ ದೈವಗಳ ಆರಾಧನೆ, ಚಿತ್ರ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಜನ ಮೆಚ್ಚುಗೆ ಸೂಚಿಸಿದ್ದಾರೆ. ಕರ್ನಾಟಕದ ಸಂಸ್ಕೃತಿ ಆಚರಣೆಗಳನ್ನು ಬೇರೆ ರಾಜ್ಯ ಹಾಗು ದೇಶದ ಜನ ನೋಡಿ ಅಚ್ಚರಿ ಹಾಗು ಸಂತೋಷ ವ್ಯಕ್ತಪಡಿಸಿದ್ದಾರೆ. ಆದರೆ ಕರ್ನಾಟಕದ ಕೆಲ ಜನರು ಇದರ ಸುತ್ತಲೂ ಚರ್ಚೆ, ವಿಮರ್ಶೆಗಳು ನಡೆಸುತ್ತಿದ್ದಾರೆ. ಇದರ ಮಧ್ಯ ನಟ ಚೇತನ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್ ಕುಮಾರ್ ಅಲ್ಲಗಳೆದಿದ್ದಾರೆ. ರಿಷಬ್ ಶೆಟ್ಟಿ ಅವರ ಮಾತು ಸುಳ್ಳು, ನಮ್ಮ ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳು. ವೈದಿಕ ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಹಿಂದಿನವು. ಮೂಲ ನಿವಾಸಿ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯದೊಂದಿಗೆ ಪ್ರದರ್ಶಿಸಬೇಕು ಎಂದು ಅವರು ಟ್ವೀಟ್ ನಲ್ಲಿ ಕೋರಿದ್ದಾರೆ.