ಕಿರುತೆರೆಯ ಟಾಪ್ ಒನ್ ಸೀರಿಯಲ್ ಅಗ್ನಿಸಾಕ್ಷಿ ನಾಯಕಿಯಾಗಿ ಮೋಡಿ ಮಾಡಿದ್ದರು. ಬಳಿಕ ಬಿಗ್ ಬಾಸ್ ಮನೆಗೆ ಲಗ್ಗೆ ಕನ್ನಡಿಗರ ಮನ ಗೆದ್ದಿದ್ದರು. ಇದೀಗ ಲಾಂಗ್ ಗ್ಯಾಪ್ ನಂತರ `ಸೀತಾರಾಮ’ ಧಾರಾವಾಹಿ ಮೂಲಕ ನಟಿ ವೈಷ್ಣವಿ ಗೌಡ ಕಂಬ್ಯಾಕ್ ಮಾಡ್ತಿದ್ದಾರೆ. ಸ್ವಪ್ನ ಕೃಷ್ಣ ನಿರ್ದೇಶನದ ಸೀತಾರಾಮ ಧಾರಾವಾಹಿಯಲ್ಲಿ ನಾಯಕಿಯಾಗಿ ವೈಷ್ಣವಿ ಎಂಟ್ರಿ ಕೊಡ್ತಿದ್ದಾರೆ. ʻಮಂಗಳಗೌರಿ ಮದುವೆʼಖ್ಯಾತಿಯ ಗಗನ್ಗೆ ಜೋಡಿಯಾಗಿ ನಟಿ ಬರುತ್ತಿದ್ದಾರೆ. ಸಿನಿಮಾ ಮತ್ತು ಸೀರಿಯಲ್ ಎರಡನ್ನ ನಟಿ ಬ್ಯಾಲೆನ್ಸ್ ಮಾಡ್ತಿದ್ದಾರೆ. ಇದು ನಿಜಕ್ಕೂ ವೈಷ್ಣವಿ ಫ್ಯಾನ್ಸ್ಗೆ ಡಬಲ್ ನ್ಯೂಸ್ ಎಂದೇ ಹೇಳಬಹುದು.
ಕೆಲವು ದಿನಗಳ ಹಿಂದಷ್ಟೇ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಲಕ್ಷಣ ಧಾರಾವಾಹಿಯಲ್ಲಿ ಭೂಪತಿಯ ಬೆಸ್ಟ್ ಫ್ರೆಂಡ್ ಆಗಿ ವೈಷ್ಣವಿ ಒಂದು ಗೆಸ್ಟ್ ರೋಲ್ ಕೂಡ ಮಾಡಿದ್ದರು. ಸದ್ಯದಲ್ಲೇ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಲಿದ್ದು, `ಅಗ್ನಿಸಾಕ್ಷಿ’ ನೋಡಿ ಮೆಚ್ಚಿಕೊಂಡಿದ್ದ ಫ್ಯಾನ್ಸ್ಗೆ ಸೀತಾರಾಮ ಸೀರಿಯಲ್ ಮೂಲಕ ಕೂಡ ನಟಿ ಅದೆಷ್ಟರ ಮಟ್ಟಿಗೆ ಮೋಡಿ ಮಾಡ್ತಾರೆ ಎಂಬುದನ್ನ ಕಾದುನೋಡಬೇಕಿದೆ.
ಸೀತಾ ರಾಮ ಧಾರಾವಾಹಿಯು ಆರ್ಆರ್ಆರ್ ಕ್ರೀಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿಮಾರ್ಣವಾಗ್ತಿದೆ. ಈ ಸೂಪರ್ ಹಿಟ್ ಪೇರ್ಗೆ ಸ್ವಪ್ನ ಕೃಷ್ಣ ಅವರು ಆಯಕ್ಷನ್ ಕಟ್ ಹೇಳಲಿದ್ದಾರೆ. ಇನ್ನು ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಕಮ್ ಬ್ಯಾಕ್ ಸುದ್ದಿ ಕೇಳಿ ಅವರ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ʻಸೀತಾರಾಮʼ ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರವಾಗಲಿದೆ.