ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ವಿವಿಧ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 273 ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಇ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC)
ಹುದ್ದೆಯ ಹೆಸರು: ಗ್ರಾಜುಯೇಟ್ ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 273
ಉದ್ಯೋಗ ಸ್ಥಳ: ಕೇರಳ – ತಮಿಳುನಾಡು – ಕರ್ನಾಟಕ – ಆಂಧ್ರ ಪ್ರದೇಶ
ಸ್ಟೈಪೆಂಡ್: 9000ರೂ. ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: ಅಧಿಕೃತ ನೇಮಕಾತಿ ಅನುಸಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿಇ, ಬಿಟೆಕ್, ಹೋಟೆಲ್ ಮ್ಯಾನೇಜ್ಮೆಂಟ್, ವಾಣಿಜ್ಯ ಪದವಿಯನ್ನು ಹೊಂದಿರಬೇಕು.
ವಯಸ್ಸಿನ ಮಿತಿ: ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ವಿನಾಯಿತಿ
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ
ನೇರ ಸಂದರ್ಶನ ನಡೆಯುವ ವಿಳಾಸ
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಕಲಮಸ್ಸೆರಿ, ಎರ್ನಾಕುಲಂ ಜಿಲ್ಲೆ, ಕೇರಳ
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 07 ಅಕ್ಟೋಬರ್ 2022
ವಾಕ್-ಇನ್ ದಿನಾಂಕ: 15 ಅಕ್ಟೋಬರ್ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: vssc.gov.in
ನೇರ ಸಂದರ್ಶನದ ವೇಳೆ ಈ ದಾಖಲೆ ಅವಶ್ಯ
-ಎರಡು ಪಾಸಪೋರ್ಸ್ ಸೈಜ್ ಫೋಟೋ
-ವಯಸ್ಸಿನ ದೃಢೀಕರಣ ಅಥವಾ ವಯಸ್ಸು ದಾಖಲಾಗಿರುವ ಎಸ್ಎಸ್ಎಲ್ಸಿ ಪ್ರಮಾಣ ಪ್ರತ್ರ, ಶೈಕ್ಷಣಿಕ ದಾಖಲೆ, ಅನುಭವ, ಸಂಶೋಧಾನ ಪತ್ರಗಳು
-ಇತರೆ ಪ್ರಮಾಣ ಪತ್ರಗಳೊಂದಿಗೆ ನೇರ ಸಂದರ್ಶನಕ್ಕೂ 30 ನಿಮಿಷ ಮೊದಲೇ ಹಾಜರಿರಬೇಕು.



