ಹರ್ಷ ನಿರ್ದೇಶನದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ನಟನೆಯ ‘ವೇದ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ವೇದ ಸಿನಿಮಾದಲ್ಲಿ ಎಂಟರ್ಟೈನ್ಮೆಂಟ್ ಜೊತೆಗೆ ಉತ್ತಮ ಸಂದೇಶ ಕೂಡಾ ಇದೆ. ವೇದ ಎಂದರೆ ಗ್ರಂಥ. ಈ ‘ವೇದ’ದಲ್ಲಿ ಪ್ರೀತಿ, ಬಾಳು, ಸಂತೋಷ ಹಾಗೂ ನಂಬಿಕೆ ಎನ್ನುವುದು ಇದೆ ಎಂದು ನಟ ಶಿವ ರಾಜ್ಕುಮಾರ್ ಹೇಳಿದರು. ಶಿವರಾಜ್ ಕುಮಾರ್ ಅಭಿನಯದ 125 ನೇ ಚಿತ್ರ ವೇದ ಸಿನಿಮಾ ಪ್ರೀ ರಿಲೀಸ್ ಈವೆಂಟ್ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮ ನಿಮಿತ್ತ ಶಿವರಾಜ್ ಕುಮಾರ್ ಜಿಲ್ಲೆಗೆ ಆಗಮಿಸಿದ್ದರು.
ವೇದ ಚಿತ್ರವನ್ನು ಸದ್ಯ ತೆಲುಗು, ತಮಿಳಿಗೆ ಡಬ್ ಮಾಡಿದ್ದೇವೆ. ಡಬ್ಬಿಂಗ್ಗೆ ಈಗ ನಮ್ಮ ವಿರೋಧವಿಲ್ಲ. ಡಬ್ಬಿಂಗ್ನಿಂದ ನಮಗೆ ಲಾಭವಿದೆ. ಸದ್ಯಕ್ಕೆ ಕನ್ನಡ ಚಿತ್ರಗಳ ಬೆಳವಣಿಗೆ ಡಬ್ಬಿಂಗ್ ಪೂರಕವಾಗಿದೆ ಎಂದರು.ಕನ್ನಡ ಸಿನಿಮಾಗಳು ಪಾನ್ ಇಂಡಿಯಾ ಮೂವಿಗಳಾಗುತ್ತಿರುವುದು ಸಂತೋಷದ ವಿಷಯ ಎಂದು ಕಾಂತಾರ, ಕೆಜಿಎಫ್ ಸಕಸ್ಸ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಕಾಂತಾರಾ ಹಾಗೂ ಕೆಜಿಎಫ್ ಇಷ್ಟೊಂದು ಹಿಟ್ ಆಗುತ್ತವೆ ಎಂದು ಯಾರೂ ಅನ್ಕೊಂಡಿರಲಿಲ್ಲ.
ಆ ರೀತಿ ಸ್ವಲ್ಪ ಡಿಫ್ರೆಂಟಾಗಿ ಸಿನೆಮಾ ಮಾಡಬೇಕು ಅಂದಾಗ್ಲೇ ಜನರಿಗೆ ಇಷ್ಟವಾಗುತ್ತದೆ ಅಂತ ಕಂಟೆಂಟ್ ಬಹಳ ಮುಖ್ಯ ಎಂದರು. ನಟಿ ರಶ್ಮಿಕಾ ಮಂದಣ್ಣರನ್ನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಬ್ಯಾನ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ನನಗೆ ಗೊತ್ತಿಲ್ಲ. ಸಿನಿಮಾ ಓಡುವ ಬಗ್ಗೆ ಮಾತ್ರ ನಾನು ನೊಡ್ತೇನೆ. ಬೇರೆ ವಿಷಯದ ಬಗ್ಗೆ ಮಾತನಾಡಲ್ಲ. ಎಂದರು.
ಮಹದಾಯಿ ಕುರಿತು ಪ್ರತಿಕ್ರಿಯೆ ನೀಡಿ, ಮಹದಾಯಿಗೆ ನಮ್ಮ ಬೆಂಬಲ ಯಾವತ್ತೂ ಇರುತ್ತೆ, ಈ ಯೋಜನೆಯನ್ನು ಈಗಿರುವ ವ್ಯವಸ್ಥೆ, ಸರ್ಕಾರ ಜಾರಿಗೆ ತರಬೇಕು, ಸರ್ಕಾರ ಆದಷ್ಟು ಬೇಗ ಯೋಜನೆ ಜಾರಿ ಮಾಡಲಿ ಅನ್ನೋದು ನಮ್ಮ ಆಶಯ ಅಂತ ಹೇಳಿದರು.
ರಾಜಕೀಯ ಪ್ರವೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಟ ಶಿವರಾಜ್ ಕುಮಾರ್ ನಾನು ರಾಜಕೀಯಕ್ಕೆ ಬರಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಗೀತಾ ಶಿವರಾಜ್ ಕುಮಾರ್ ಕೂಡ ಚುನಾವಣೆಗೆ ಸ್ಪರ್ಧಿಸಲ್ಲ, ನಾವು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇವೆ ಈ ಮೂಲಕ ಜನಸೇವೆ ಮಾಡುವುದಾಗಿ ಶಿವಣ್ಣ ಹೇಳಿದ್ದಾರೆ.