ಧಾರ್ಮಿಕ ನಂಬಿಕೆಗಳು ಸಂಗಾತಿಯನ್ನ ಆಯ್ಕೆ ಮಾಡುವ ವ್ಯಕ್ತಿಯ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಿವಾಹದಲ್ಲಿ ಸಂಗಾತಿಯನ್ನ ಆಯ್ಕೆ ಮಾಡುವ ಸ್ವಾತಂತ್ರ್ಯವು ಸಂವಿಧಾನದ ಅನುಚ್ಛೇದ 21 ರ ಒಂದು ಭಾಗವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ
ತಮ್ಮ ಸ್ವಂತ ಇಚ್ಛೆಯಿಂದ ಮದುವೆಯಾಗುವವರು ತಮ್ಮವರಿಂದ ಅಪಾಯ ಎದುರಿಸುತ್ತಿದ್ದಾರೆಂದು ಮನವರಿಕೆಯಾದಲ್ಲಿ ತ್ವರಿತವಾಗಿ ಸ್ಪಂದಿಸಿ ರಕ್ಷಣೆಗೆ ಪೊಲೀಸರು ಕ್ರಮಕೈಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.
ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯ, ಧಾರ್ಮಿಕ ನಂಬಿಕೆಗಳು ಸಂಗಾತಿಯನ್ನ ಆಯ್ಕೆ ಮಾಡುವ ವ್ಯಕ್ತಿಯ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದಿದೆ.