ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳ ಪೈಕಿ ಮಹಿಳೆಯರ ಬಹು ನಿರೀಕ್ಷಿತ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಅರ್ಜಿ ನಮೂನೆಯಲ್ಲಿ ಮನೆ ಯಜಮಾನಿಯ ಆಧಾರ್ ಕಾರ್ಡ್, ಪಾನ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಫೋನ್ ನಂಬರ್, ವೋಟರ್ ಐಡಿ,ರೇಷನ್ ಕಾರ್ಡ್, ಇನ್ನಿತರ ಪ್ರಮುಖ ಮಾಹಿತಿಗಳನ್ನು ನೀಡುವಂತೆ ಸೂಚಿಸಲಾಗಿದೆ. ಈಗಾಗಲೇ ಜೂ. 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಯೋಜನೆ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
ಈ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರ ಲಕ್ಷ್ಮಿ ಹೆಬ್ಬಾಳ್ಕರ್, ‘ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಫಲಾನಿಭವಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮಒನ್ ಪೋರ್ಟಲ್ ಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮತ್ತು ಆಪ್ಲೈನ್ ಮೂಲಕ ಅರ್ಜಿ ಅಲ್ಲಿಸಬಹುದಾಗಿದ್ದು, ವರ್ಷವಿಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ’ ಎಂದು ತಿಳಿಸಿದ್ದಾರೆ.

ಅರ್ಜಿ ಸಲ್ಲಿಕೆ ಹೇಗೆ?
ಮಾಸಿಕ 2000 ರೂ. ಲಭಿಸುವ ಗೃಹಲಕ್ಷ್ಮಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು ಸೇವಾಸಿಂಧು ಅಧಿಕೃತ ವೆಬ್ಸೈಟ್ https://sevasindhuservices.karnatakagov.in/ ಗೆ ಭೇಟಿ ನೀಡಿ ಅಲ್ಲಿ ಗೃಹಲಕ್ಷ್ಮಿಯೋಜನೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಅರ್ಜಿ ಫಾರಂ ಡೌನ್ಲೋಡ್ ಮಾಡಿಕೊಂಡು ಬಳಿಕ ಅದನ್ನು ಭರ್ತಿ ಮಾಡಬೇಕು. ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಅರ್ಜಿ ಸಲ್ಲಿಸಬಹುದು.
ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಪಾನ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಗುರುತಿನ ಚೀಟಿ ಜೊತೆಗೆ ಬ್ಯಾಂಕ್ ಖಾತೆಯ ಐ.ಎಪ್.ಎಸ್.ಸಿ ಕೋಡ್ ಅಗತ್ಯವಿರುತ್ತದೆ. ಇದರೊಂದಿಗೆ ಮನೆಯ ಯಜಮಾನಿಯ ಆಧಾರ್ ಕಾರ್ಡ್,ವೋಟರ್ ಐಡಿ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಗಳು ಅಗತ್ಯವಿರುತ್ತದೆ ಎನ್ನಲಾಗಿದೆ.