ಸ್ಯಾಂಡಲ್ವುಡ್ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇಬ್ಬರೂ ಮದುವೆ ಆಗಲಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿತ್ತು. ಅದಕ್ಕೆ ಸರಿಯಾಗಿ ಇಬ್ಬರೂ ಏರ್ಪೋರ್ಟ್ನಲ್ಲಿ ಜೊತೆಯಾಗಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹರಿಪ್ರಿಯಾ ಬಿಳಿ ಬಣ್ಣದ ಡ್ರೆಸ್ ಧರಿಸಿದ್ದರು. ವಸಿಷ್ಠ ಬಿಳಿ ಬಣ್ಣದ ಟೀ ಶರ್ಟ್ ಧರಿಸಿದ್ದರು. ಇಬ್ಬರು ಕೈ ಕೈ ಹಿಡಿದು ಓಡಾಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇಬ್ಬರ ಲವ್ ಮ್ಯಾಟರ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಜೋಡಿ ಕಾಣಿಸಿಕೊಂಡಿದೆ. ಏರ್ಪೋರ್ಟ್ನಲ್ಲಿ ಮಾಸ್ಕ್ ಧರಿಸಿಕೊಂಡು ಕೈ ಕೈ ಹಿಡಿದುಕೊಂಡು ಸಾಗುತ್ತಿರುವ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇಬ್ಬರೂ ಈಗಾಗಲೇ ಮದುವೆಗೆ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಡಿಸೆಂಬರ್ ಕೊನೆಯಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಳ್ಳಬಹುದು ಎಂಬ ಗುಸುಗುಸು ಕೂಡ ಕೇಳಿ ಬರುತ್ತಿದೆ. ನಿಶ್ಚಿತಾರ್ಥಕ್ಕೆ ಈ ಜೋಡಿ ರೆಡಿಯಾಗುತ್ತಿದ್ದು, ಅದಕ್ಕೆ ದುಬೈನಲ್ಲಿ ಶಾಪಿಂಗ್ ಮಾಡಿ ಬಂದಿದೆ ಅನ್ನೋ ಮಾತು ಕೇಳಿ ಬರುತ್ತಿದೆ.
ಇತ್ತೀಚಿಗಷ್ಟೆ ಪರಿಪ್ರಿಯಾ ಮೂಗು ಚುಚ್ಚಿಕೊಂಚಿದ್ದರು. ವಿಡಿಯೋವನ್ನು ಶೇರ್ ಮಾಡಿದ್ದರು. ಆ ವೇಳೆ ಹರಿಪ್ರಿಯಾ ಜೊತೆ ವಸಿಷ್ಠ ಕೂಡ ಇದ್ದರು. ಮೂಗು ಎಲ್ಲಿ ಚುಚ್ಚಬೇಕೆಂದು ಗುರುತು ಮಾಡಿದ್ದೆ ವಸಿಷ್ಠ. ಮೂಗು ಚುಚ್ಚಿದ ಬಳಿಕ ವಸಿಷ್ಠ ಹರಿಪ್ರಿಯಗೆ ಮುತ್ತು ನೀಡಿ ಸಮಾಧಾನ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಆದರೆ ವಸಿಷ್ಠ ಮುಖ ಎಲ್ಲೂ ರಿವೀಲ್ ಆಗಿರಲಿಲ್ಲ.