ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅಧಿಕಾರವಧಿ ಮುಗಿಯುತ್ತಾ ಬಂದಿದೆ.ಈ ತಿಂಗಳ ಅಂತ್ಯದಲ್ಲಿ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನದ ಅವಧಿ ಮುಕ್ತಾಯವಾಗಲಿದೆ. ಅವರ ಸ್ಥಾನಕ್ಕೆ ರೋಜರ್ ಬಿನ್ನಿ ಆಯ್ಕೆಯಾಗುವ ಸಾಧ್ಯತೆ ಇದೆ.
2019ರಲ್ಲಿ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೇರಿದ್ದರು. ಇದೀಗ ಅಧಿಕಾರಾವಧಿ ಮುಕ್ತಾಯವಾಗುತ್ತಿದೆ. ಅದರೆ ಎರಡನೇ ಅವಧಿಗೂ ಮತ್ತೆ ಅಧ್ಯಕ್ಷರಾಗುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೆ ಸಮಿತಿಯ ಪ್ರಕಾರ ಅದು ಸಾಧ್ಯವಿಲ್ಲದ ಕಾರಣ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ನಲ್ಲಿ ಬಿಸಿಸಿಐ ನಿಯಮವನ್ನು ಕೊಂಚ ಸಡಿಲಿಕೆ ತರಲಾಗಿತ್ತು. ಅದರಂತೆ ಕಾರ್ಯದರ್ಶಿಯಾಗಿ ಜೈಶಾ ಉಳಿದುಕೊಂಡರು, ದಾದಾಗೆ ಅವಕಾಶ ಮಿಸ್ ಆಯಿತು.

ಇನ್ನು ಸೌರವ್ ಗಂಗೂಲಿ ತಮ್ಮ ಅಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಿದ್ದು, ಜೀವನ ಪರ್ಯಂತ ಆಟಗಾರರಾಗಲೂ ಅಥವಾ ಅಧ್ಯಕ್ಷರಾಗಲೂ ಯಾರಿಂದಲೂ ಸಾಧ್ಯವಿಲ್ಲ. ನನ್ನ ಅವಧಿಯಲ್ಲಿ ಕೆಲವೊಂದು ಕಠಿಣವಾದಂತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಯ್ತು. ನನಗೆ ತೃಪ್ತಿ ಇದೆ. ಭಾರತ ಪರ ಆಡಿದ್ದು ನನ್ನ ಪಾಲಿನ ಅತ್ಯುತ್ತಮ ದಿನಗಳು. ನಾನು ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದೇನೆ. ಈಗ ನಾನು ಅದಕ್ಕಿಂತ ದೊಡ್ಡ ಕೆಲಸ ಮಾಡಬೇಕೆಂದಿದ್ದೇನೆ. ಎಂದಿದ್ದಾರೆ.
1983ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ, ಮಂಗಳವಾರವಷ್ಟೇ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬಹುತೇಕ ರೋಜರ್ ಬಿನ್ನಿ ಅವಿರೋಧವಾಗಿ ಬಿಸಿಸಿಐ ನೂತನ ಅಧ್ಯಕ್ಷರಾಗಿ ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿವೆ. ಇನ್ನು ಜಯ್ ಶಾ ಕೂಡಾ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಮ್ಮ ನಾಮಪತ್ರವನ್ನು ಸಲ್ಲಿಸಿದ್ದು, ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ನೇಮಕವಾಗುವುದು ಬಹುತೇಕ ಖಚಿತ ಎನಿಸಿದೆ. ಒಂದು ವೇಳೆ ಬೇರೆ ಯಾವ ಅಭ್ಯರ್ಥಿಯು ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಾಮಪತ್ರ ಸಲ್ಲಿಸದೇ ಹೋದರೆ, ಜಯ್ ಶಾ ಕೂಡಾ ಅವಿರೋಧವಾಗಿ ಬಿಸಿಸಿಐ ಕಾರ್ಯದರ್ಶಿಯಾಗಿ ಎರಡನೇ ಅವಧಿಗೆ ಆಯ್ಕೆಯಾಗುವ ಸಾಧ್ಯತೆಯಿದೆ.